Home ಕರಾವಳಿ ಮಂಗಳೂರು | ವಿದ್ಯಾರ್ಥಿಗಳ ಅಶ್ಲೀಲ ವೀಡಿಯೋಗೂ ಪಬ್ ದಾಳಿಗೂ ಸಂಬಂಧವಿಲ್ಲ : ಕಮಿಷನರ್ ಶಶಿಕುಮಾರ್

ಮಂಗಳೂರು | ವಿದ್ಯಾರ್ಥಿಗಳ ಅಶ್ಲೀಲ ವೀಡಿಯೋಗೂ ಪಬ್ ದಾಳಿಗೂ ಸಂಬಂಧವಿಲ್ಲ : ಕಮಿಷನರ್ ಶಶಿಕುಮಾರ್

ಮಂಗಳೂರು: ವಿದ್ಯಾರ್ಥಿಗಳ ಅಶ್ಲೀಲ ವೀಡಿಯೋ ಪ್ರಕರಣಕ್ಕೂ ಪಬ್ ದಾಳಿಗೂ ಸಂಬಂಧವಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಪಷ್ಟ ಪಡಿಸಿದ್ದಾರೆ.


ಬಲ್ಮಠ ರಸ್ತೆಯಲ್ಲಿರುವ ರಿಸೈಕಲ್ ರೆಸ್ಟೋರೆಂಟ್ ಗೆ ಇಂದು ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳ ಅಶ್ಲೀಲ ವೀಡಿಯೋ ಪ್ರಕರಣಕ್ಕೂ ಪಬ್ ಗೂ ಸಂಬಂಧವಿಲ್ಲ. ರಿಸೈಕಲ್ ರೆಸ್ಟೋರೆಂಟ್ ಪಬ್ ಬಹಳಷ್ಟು ವರ್ಷಗಳಿಂದ ಇದೆ. ನಿನ್ನೆ ರಾತ್ರಿ 9 ಗಂಟೆಯ ಸುಮಾರಿಗೆ ಸಂಘಪರಿವಾರದ ಐದಾರು ಕಾರ್ಯಕರ್ತರು ಬಂದಿದ್ದಾರೆ ಎಂದು ಹೇಳಿದರು.


ಇಲ್ಲಿನ ಬೌನ್ಸರ್ ದಿನೇಶ್ ಗೆ ಮೈನರ್ ಹುಡುಗ-ಹುಡುಗಿ ಇದ್ದಾರೆ ಎಂದು ಹೇಳಿದ್ದಾರೆ. ಹೀಗಾಗಿ ಮ್ಯಾನೇಜರ್ ಒಳಗೆ ಹೋಗಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಸ್ಥಳೀಯ ಕಾಲೇಜಿನ ಕೆಲ ವಿದ್ಯಾರ್ಥಿಗಳು ಇದ್ದರು ಎಂದು ತಿಳಿಸಿದರು. ಈ ಬಗ್ಗೆ ಸಿಸಿಟಿವಿ ಪರಿಶೀಲನೆ ಮಾಡಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

Join Whatsapp
Exit mobile version