ಚಾಮರಾಜನಗರ : ಭ್ರೂಣ ಹತ್ಯೆಯಂತಹ ದ್ರೋಹದ ಕೆಲಸ ಮತ್ತೊಂದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅವರು ಹೇಳಿದರು.
ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಭ್ರೂಣ ಹತ್ಯೆ ಮಾಡಿದವರ ಜೊತೆಗೆ ಭ್ರೂಣ ಹತ್ಯೆಗೆ ಒಳಗಾದವರಿಗೂ ಕಠಿಣ ಶಿಕ್ಷೆ ಆಗಬೇಕು. ಆಗ ಮಾತ್ರ ಈ ರೀತಿ ಪಾಪದ ಕೃತ್ಯ ನಿಲ್ಲಲ್ಲಿದೆ. ಈ ಘಟನೆ ಬೆಳಕಿಗೆ ಬಂದ ನಂತರ ಸರ್ಕಾರ ಹಲವು ಕ್ರಮ ತೆಗೆದುಕೊಂಡಿದೆ ಎಂದರು. ಇನ್ನು ಚೀನಾದಲ್ಲಿ ನ್ಯುಮೋನಿಯಾ ಸೋಂಕು ಹೆಚ್ಚಳವಾದ ಸಂಬಂಧ ರಾಜ್ಯವು ಕೂಡ ಎಚ್ಚೆತ್ತುಕೊಂಡಿದೆ. ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಚೆಕ್ ಪೋಸ್ಟ್ಗಳಲ್ಲಿ ತಪಾಸಣೆ, ವಿಶೇಷ ವಾರ್ಡ್ಗಳನ್ನು ರೂಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.