Home ಟಾಪ್ ಸುದ್ದಿಗಳು ಮೇಕೆದಾಟು ಪಾದಯಾತ್ರೆ ಹಿಂದೆ ರಾಜಕೀಯ ಉದ್ದೇಶ ಇಲ್ಲ: ಸಿದ್ದರಾಮಯ್ಯ

ಮೇಕೆದಾಟು ಪಾದಯಾತ್ರೆ ಹಿಂದೆ ರಾಜಕೀಯ ಉದ್ದೇಶ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಹಿಂದೆ ರಾಜಕೀಯ ಉದ್ದೇಶ ಇಲ್ಲ. ಜನಹಿತಕ್ಕಾಗಿ ಜನ ಬೆಂಬಲದೊಂದಿಗೆ ನಡೆಯುತ್ತಿರುವ ಹೋರಾಟ ಇದಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಪಾದಯಾತ್ರೆ ಮಾರ್ಗಮಧ್ಯೆ ಮಾಧ್ಯಮ ಪ್ರತಿನಿಧಿಗಳ ಜೊತೆ ಸಿದ್ದರಾಮಯ್ಯ ಅವರು ಮಾತನಾಡಿದರು.

  ಪಾದಯಾತ್ರೆ ರಾಜಕೀಯಕ್ಕಾಗಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಕುಡಿಯುವ ನೀರಿನ ವಿಷಯದಲ್ಲಿ ಯಾರೂ ರಾಜಕೀಯ ಮಾಡುವುದಿಲ್ಲ. ಮೇಕೆದಾಟು ಯೋಜನೆ ವಿಚಾರದಲ್ಲಿ ಸರ್ಕಾರವನ್ನು ಬಡಿದೆಬ್ಬಿಸಲು ನಾವು ಹೋರಾಟ ಮಾಡುತ್ತಿದ್ದೇವೆ. ಬಿಜೆಪಿ ಅಧಿಕಾರಕ್ಕೆ ಬಂದು ಮೂರು ವರ್ಷವಾಗಿದೆ. ಇನ್ನೂ ಮೇಕೆದಾಟು ಯೋಜನೆಗೆ ಪರಿಸರ ಇಲಾಖೆಯಿಂದ ನಿರಾಕ್ಷೇಪಣ ಪತ್ರ ಪಡೆದಿಲ್ಲ. ಇವರು ಬೆಂಗಳೂರು ಜನರಿಗೆ ದ್ರೋಹ ಮಾಡಿದ್ದಾರೆ ಎಂದರು.

ರಾಜಕೀಯ ಹೋರಾಟ ಎನ್ನುವ ಬೊಮ್ಮಯಿ ಹೇಳಿಕೆ ವಿಚಾರದ ಬಗ್ಗೆ, ಬಸವರಾಜ ಬೊಮ್ಮಯಿ ಹೋರಾಟದ ಮೂಲಕ ಬಂದವರಲ್ಲ. ಪಾದಯಾತ್ರೆ ಎನ್ನುವ ಕಲ್ಪನೆ ಸಹ ಇವರಿಗಿಲ್ಲ. ಯಡಿಯೂರಪ್ಪ ಮೂಲಕ ಅಧಿಕಾರಕ್ಕೆ ಬಂದವರು ಜನರ ಆಶಿರ್ವಾದದಿಂದ ಅಧಿಕಾರಕ್ಕೆ ಬೊಮ್ಮಾಯಿ ಬಂದಿಲ್ಲ. ಯಡಿಯೂರಪ್ಪ ಆಪರೇಷನ್ ಕಮಲ ಮಾಡಿದಕ್ಕೆ ಇವರು ಅಧಿಕಾರಕ್ಕೆ ಬಂದರು.  ಬಜೆಟ್ ಅಧಿವೇಶನದಲ್ಲಿ ಎಲ್ಲಾ ವಿಷಯ ಪ್ರಸ್ತಾಪ ಮಾಡುತ್ತೇವೆ. ನೂರಕ್ಕೆ ನೂರು ಮುಂದೆ ನಾವು ಅಧಿಕಾರಕ್ಕೆ ಬರುತ್ತೇವೆ. ಜನರ ಅಶಿರ್ವಾದ ನಮ್ಮ ಮೇಲಿದೆ ಎಂದರು.

Join Whatsapp
Exit mobile version