ಮುಂದಿನ‌ 5 ವರ್ಷ ನಿಖಿಲ್​​ ರನ್ನು ಚುನಾವಣೆಗೆ ಕರೆತರುವ ಪ್ರಶ್ನೆ ಇಲ್ಲ: ಹೆಚ್​ಡಿಕೆ

Prasthutha|

ಬೆಂಗಳೂರು: ಮುಂದಿನ‌ 5 ವರ್ಷ ನಿಖಿಲ್​​ರನ್ನು ಚುನಾವಣೆಗೆ ಕರೆತರುವ ಪ್ರಶ್ನೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement -

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಾವಿದನಾಗಿ ಜೀವನ ರೂಪಿಸಿಕೊಳ್ಳುವಂತೆ ನಿಖಿಲ್​​ಗೆ ಹೇಳಿದ್ದೇನೆ. ರಾಜಕೀಯದ ಸಹವಾಸಕ್ಕೆ ಹೋಗದೆ, ಭಗವಂತ ಕೊಟ್ಟ ಕಲೆ ಇದೆ. ನಿಖಿಲ್ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದರು.

ಈಗಾಗಲೇ 3 ಚಿತ್ರ ನಿರ್ಮಾಣ ಮಾಡಲು ಹಲವು ಸಂಸ್ಥೆಗಳು ಬಂದಿವೆ. ಈಗಾಗಲೇ ನಿಖಿಲ್​ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದಾರೆ. ಮಂಡ್ಯ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧಿಸಲು ತಯಾರಿರಲಿಲ್ಲ. ಕಾರ್ಯಕರ್ತರು ಹಾಗೂ ಶಾಸಕರ ಒತ್ತಡಕ್ಕೆ ನಿಖಿಲ್​​ ತಲೆ ಕೊಟ್ಟರು. ಸೋಲು, ಗೆಲವು ಸಾಮಾನ್ಯ, ಆ ಬಗ್ಗೆ ಚಿಂತಿಸುವುದಿಲ್ಲ. ಹೆಚ್​​.ಡಿ.ದೇವೇಗೌಡರು, ನಾನು ಚುನಾವಣೆಯಲ್ಲಿ ಸೋತಿಲ್ವಾ? ಎಂದರು.

Join Whatsapp