ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ – ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ

Prasthutha|

ದೆಹಲಿ: ದೆಹಲಿಯಿಂದಲೇ ವಿರೋಧಿ ಪಾಳಯಕ್ಕೆ ಖಡಕ್ ಸಂದೇಶ ರವಾನಿಸಿರುವ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಶುದ್ಧ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

ಮತ್ತೆ ಆಗಸ್ಟ್ ಮೊದಲ ವಾರದಲ್ಲಿ ದೆಹಲಿಗೆ ಬರುತ್ತೇನೆ. ರಾಜೀನಾಮೆ ನೀಡುವ ವಿಚಾರ ಸುಳ್ಳು, ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ದೆಹಲಿಯಲ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆ ಸುದ್ದಿ ಹರಿದಾಡುತ್ತಿತ್ತು. ಕೆಲ ಸಚಿವರು, ಶಾಸಕರು ದೆಹಲಿಗೆ ತೆರಳಿ ಬಂದ ನಂತರ, ಸಿಎಂ ಬದಲಾವಣೆ ಸುದ್ದಿ ಮತ್ತಷ್ಟು ತೀವ್ರವಾಗಿ ಹರಡುತ್ತಿತ್ತು. ಇದರ ಮಧ್ಯೆ ನಿನ್ನೆ ದೆಹಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್ ಸಿಎಂಗೆ ಬುಲಾವ್ ನೀಡಿತ್ತು.

ಇದರಿಂದಾಗಿ ದೆಹಲಿಗೆ ಬಿಜೆಪಿ ವರಿಷ್ಠರ ಸೂಚನೆ ಮೇರೆಗೆ ಯಡಿಯೂರಪ್ಪ ತೆರಳಿದ್ದರು. ಅವರೊಂದಿಗೆ ಅವರ ಇಬ್ಬರು ಪುತ್ರರು ಕೂಡ ಹೋಗಿದ್ದರು. ಹೀಗಾಗಿ ಸಿಎಂ ಬದಲಾವಣೆ ಕುರಿತಂತೆ ಚರ್ಚಿಸಲು ಬಿಜೆಪಿ ಹೈಕಮಾಂಡ್ ದೆಹಲಿ ಯಡಿಯೂರಪ್ಪ ಅವರನ್ನು ಕರೆಸಿಕೊಂಡಿದೆ ಎಂದೇ ಹೇಳಲಾಗಿತ್ತು. ಆದರೆ ಬಿಜೆಪಿ ವರಿಷ್ಠರನ್ನು ರಾಜ್ಯದ ಅಭಿವೃದ್ಧಿ ವಿಚಾರವಾಗಿ ಭೇಟಿ ಮಾಡಲು ಆಗಮಿಸಲಿದ್ದೇನೆ ಎಂಬುದಾಗಿ ಸಿಎಂ ಸ್ಪಷ್ಟ ಪಡಿಸಿದ್ದಾರೆ.

Join Whatsapp
Exit mobile version