ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನವದೆಹಲಿಯಲ್ಲಿ ಖರ್ಗೆ ನಿವಾಸಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಲ್ಲ. ಇದೆಲ್ಲ ಸುಳ್ಳು. ಕಾಂಗ್ರೆಸ್ ಪಕ್ಷ ನನ್ನ ತಾಯಿ ಇದ್ದಂತೆ. ನಾನು ಯಾವುದೇ ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.