ರಾಜ್ಯದಲ್ಲಿ ಮುಂಗಾರು ಹಂಗಾಮಿಗೆ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಿಲ್ಲ: ಸಚಿವ ಬಿ.ಸಿ.ಪಾಟೀಲ್

Prasthutha|

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿಗೆ ನಿಗದಿತ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಇದ್ದು, ಸಕಾಲದಲ್ಲಿ ರೈತರಿಗೆ ಇವುಗಳನ್ನು ತಲುಪಿಸುವಂತೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ರಾಜ್ಯಮಟ್ಟದ ಮುಂಗಾರು ಹಂಗಾಮಿನ ಕಾರ್ಯಾಗಾರ ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಿಗಳಿಗೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸರಬರಾಜು ಆಗದಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

- Advertisement -


ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ, ಅವರು ಕೃಷಿ ಇಲಾಖೆಯ ಎಲ್ಲಾ ಕಾರ್ಯಕ್ರಮಗಳಿಗೆ ಸರ್ಕಾರದ ಹಂತದಲ್ಲಿ ಅನುದಾನ ಸಕಾಲಕ್ಕೆ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದ್ದು ರೈತರಿಗೆ ಇಲಾಖಾ ಕಾರ್ಯಕ್ರಮಗಳನ್ನು ತಲುಪಿಸುವ ಜವಾಬ್ದಾರಿಯನ್ನು ಇಲಾಖೆ ಅಧಿಕಾರಿಗಳು ವಹಿಸಬೇಕೆಂದು ತಿಳಿಸಿದರು.


ಕೃಷಿ ಆಯುಕ್ತ ಬ್ರಿಜೇಶ್ ಕುಮಾರ್ ದಿಕ್ಷಿತ್ ಮಾತನಾಡಿ, ಫಸಲ್ ಭೀಮಾ ಯೋಜನೆ ಮತ್ತು ಬೆಳೆ ಸಮೀಕ್ಷೆ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಬೆಳೆ ಸಮೀಕ್ಷೆಯನ್ನು ರೈತರೇ ಹೆಚ್ಚಾಗಿ ಮಾಡುವಂತೆ ಪ್ರೋತ್ಸಾಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -


ಜಲಾನಯನ ಇಲಾಖೆ ಆಯುಕ್ತ ವೆಂಕಟೇಶ್ ಮಾತನಾಡಿ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ರಾಜ್ಯದ ಎಲ್ಲಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರು, ಉಪ ಕೃಷಿ ನಿರ್ದೇಶಕರು, ಸಹಾಯಕ ಕೃಷಿ ನಿರ್ದೇಶಕರು ಸದರಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಕೃಷಿ ಇಲಾಖೆಯ ನಿರ್ದೇಶಕಿ ನಂದಿನಿ ಕುಮಾರಿ, ಕೃಷಿ ವಿಶ್ವವಿದ್ಯಾಲಯದ ಕುಲಪತಿ ರಾಜೇಂದ್ರಪ್ರಸಾದ್, ಕೃಷಿ ಇಲಾಖೆ ಹಿರಿಯ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಕೃಷಿ ಇಲಾಖೆಯ ಪ್ರಸಕ್ತ ಸಾಲಿನಲ್ಲಿ ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

Join Whatsapp