ಶಾಲೆಯಲ್ಲಿ ಮಕ್ಕಳು ಶೌಚಾಲಯ ಸ್ವಚ್ಛಗೊಳಿಸಿದರೆ ತಪ್ಪಿಲ್ಲ: ಯು.ಟಿ ಖಾದರ್

Prasthutha|

ಬೆಂಗಳೂರು: ವಿದ್ಯಾರ್ಥಿಗಳು ಅಗತ್ಯ ಸಾಧನಗಳನ್ನು ಬಳಸಿಕೊಂಡು ಶೌಚಾಲಯ ಸ್ವಚ್ಛಗೊಳಿಸಿರುವುದರಲ್ಲಿ ತಪ್ಪಿಲ್ಲ. ಇಂಥ ಕೆಲಸಗಳನ್ನು ಚಿಕ್ಕಂದಿನಲ್ಲೇ ತಿಳಿದುಕೊಳ್ಳುವುದು ಉತ್ತಮ. ಇದೂ ಸಹ ಶಿಕ್ಷಣದ ಒಂದು ಭಾಗ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.

- Advertisement -

ವಿದ್ಯಾರ್ಥಿಗಳ ಕೈಯಲ್ಲಿ ಸರ್ಕಾರಿ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದ ವಿಚಾರ ಇತ್ತೀಚೆಗೆ ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿತ್ತು. ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಕೈಗೊಂಡು, ನಂತರ ಹೊಸ ನಿಯಮವನ್ನೂ ರೂಪಿಸಲಾಗಿತ್ತು.

ಈ ಕುರಿತು ಮಾತನಾಡಿದ ಸ್ಪೀಕರ್ ಯುಟಿ ಖಾದರ್, ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಸ್ವಚ್ಛಗೊಳಿಸುವುದಕ್ಕೆ, ಕಸ ಗುಡಿಸುವುದಕ್ಕೆಂದೇ ಪ್ರತ್ಯೇಕ ಸಿಬ್ಬಂದಿ ಇರುವುದಿಲ್ಲ. ವಿದ್ಯಾರ್ಥಿಗಳು ಆ ಕೆಲಸ ಮಾಡುವುದು ಸಹಜ. ಕೈಗವಸು ಹಾಕಿ ಬ್ರಷ್ ಬಳಸಿ ಶೌಚಾಲಯ ಸ್ವಚ್ಛಗೊಳಿಸಿವುದು ತಪ್ಪಲ್ಲ. ಸಣ್ಣವನಿದ್ದಾಗ ನಾನೂ ಆ ಕೆಲಸ ಮಾಡಿದ್ದೆ ಎಂದು ಖಾದರ್ ಹೇಳಿದ್ದಾರೆ.



Join Whatsapp