ಬಿಜೆಪಿ ಜೊತೆ ಮೈತ್ರಿ ವಿಚಾರದಲ್ಲಿ ಇನ್ನೂ ಸಮಯ ಇದೆ: ಕುಮಾರಸ್ವಾಮಿ

Prasthutha|

ಬೆಂಗಳೂರು: ಲೋಕಸಭೆ ಚುನಾವಣೆಗೆ ಇನ್ನೂ ಕೆಲ ತಿಂಗಳು ಬಾಕಿ ಇರುವಾಗಲೇ ರಾಜ್ಯದಲ್ಲಿ ಚುನಾವಣಾ ಪೂರ್ವ ಮೈತ್ರಿ ಚುಟುವಟಿಕೆಗಳು ಬಿರುಸುಗೊಂಡಿವೆ. ಈ ಮಧ್ಯೆ ಬಿಜೆಪಿ ಜೊತೆ ಮೈತ್ರಿ ವಿಚಾರದಲ್ಲಿ ಇನ್ನೂ ಸಮಯ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

- Advertisement -


ಜೆ ಪಿ ನಗರದ ತಿರುಮಲಗಿರಿ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈತ್ರಿ ಬಗ್ಗೆ ಹೆಚ್ಚು ಮಾತನಾಡಲು ನಿರಾಕರಿಸಿದ್ದಾರೆ.

ಬಿಜೆಪಿ ಮೈತ್ರಿ ವಿಚಾರ ಇನ್ನೂ ಸಮಯ ಇದೆ. ತಂದೆಯವರ ಆರೋಗ್ಯ ವೃದ್ಧಿ ಗಾಗಿ ಪೂಜೆ ಸಲ್ಲಿಸಿದ್ದೇನೆ. ನಮ್ಮ ಕುಟುಂಬದಲ್ಲಿ ಇತ್ತಿಚೇಗಿನ ನಡೆದ ಬೆಳವಣಿಗೆ,ಆರೋಗ್ಯ ವೃದ್ದಿಗೆ ಪೂಜೆ ಮಾಡಿದ್ದೇನೆ. ಹಿಂದೂ ಧರ್ಮದ ಸಂಪ್ರದಾಯದಂತೆ ಧಾರ್ಮಿಕ ಪೂಜೆ ನೆರವೇರಿಸಿದ್ದೇನೆ ಎಂದರು.

Join Whatsapp