Home ಟಾಪ್ ಸುದ್ದಿಗಳು ಡಿಕೆಶಿ ಪರ ಕೆಲ ಶಾಸಕರ ಬೆಂಬಲ ಇದೆ, 5 ವರ್ಷವೂ ನಾನೇ ಸಿಎಂ: ಸಿದ್ದರಾಮಯ್ಯ

ಡಿಕೆಶಿ ಪರ ಕೆಲ ಶಾಸಕರ ಬೆಂಬಲ ಇದೆ, 5 ವರ್ಷವೂ ನಾನೇ ಸಿಎಂ: ಸಿದ್ದರಾಮಯ್ಯ

0

ನವದೆಹಲಿ: 5 ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಾಹಿನಿಯೊಂದರ ಜೊತೆ ಮಾತನಾಡಿದ ಅವರು, ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿ ಇರುತ್ತೇನೆ. ಈ ವಿಚಾರವನ್ನು ನಾನು ಈಗಾಗಲೇ ಸ್ಪಷ್ಟಪಡಿಸಿದ್ದು ಜುಲೈ 2 ರಂದು ನಾನು ಈ ಹೇಳಿಕೆಯನ್ನು ನೀಡಿದ್ದೇನೆ. ಆ ದಿನ ಡಿಕೆ ಶಿವಕುಮಾರ್ ಕೂಡ ಅಲ್ಲಿದ್ದರು ಎಂದು ತಿಳಿಸಿದರು.

ಎರಡೂವರೆ ವರ್ಷದ ಬಳಿಕ ಯಾವುದೇ ಅಧಿಕಾರ ಹಂಚಿಕೆ ಮಾತುಕತೆ ನಡೆದಿಲ್ಲ. ನಾನೇ ಮುಖ್ಯಮಂತ್ರಿ ಕುರ್ಚಿಯಲ್ಲಿ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.

ನಮ್ಮದು ಹೈಕಮಾಂಡ್‌ ಅಧಾರಿತ ಪಕ್ಷ. 2023ರ ಸಭೆಯಲ್ಲಿ ಎರಡೂವರೆ ವರ್ಷಗಳ ಅಧಿಕಾರಿ ಹಂಚಿಕೆಯ ಬಗ್ಗೆ ಯಾವುದೇ ಮಾತುಕತೆಯಾಗಿಲ್ಲ. ನಾವು ಯಾವುದೇ ನಿರ್ಧಾರ ಕೈಗೊಂಡರೂ ಅದನ್ನು ಅನುಸರಿಸಬೇಕೆಂದು ಹೈಕಮಾಂಡ್‌ ಹೇಳಿತ್ತು. ಅವರು ಏನೇ ಹೇಳಿದರೂ, ನಾವು ಅದನ್ನು ಅನುಸರಿಸಬೇಕು. ನಾನು ಅನುಸರಿಸುತ್ತೇನೆ, ಮತ್ತು ಡಿಕೆ ಶಿವಕುಮಾರ್ ಕೂಡ ಅನುಸರಿಸುತ್ತಾರೆ ಎಂದರು.

ಡಿಕೆ ಶಿವಕುಮಾರ್ ಅವರ ರಾಜಕೀಯ ಆಕಾಂಕ್ಷೆಗಳ ಬಗ್ಗೆ ಕೇಳಿದ್ದಕ್ಕೆ, ಡಿಕೆ ಶಿವಕುಮಾರ್ ಕೂಡ ಸಿಎಂ ಆಕಾಂಕ್ಷಿ. ಅದರಲ್ಲಿ ಯಾವುದೇ ತಪ್ಪಿಲ್ಲ. ಆದರೆ ಡಿಕೆ ಶಿವಕುಮಾರ್‌ ಅವರೇ ಈಗ ಕುರ್ಚಿ ಖಾಲಿ ಇಲ್ಲ ಎಂದಿದ್ದಾರೆ. ನಾಯಕತ್ವಕ್ಕೆ ಸಂಬಂಧಿಸಿದಂತೆ, ಸುರ್ಜೇವಾಲಾ ಯಾವುದೇ ಪ್ರಶ್ನೆಯನ್ನು ಕೇಳಿಲ್ಲ. ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸುವ ಕೆಲವು ಶಾಸಕರು ಯಾವಾಗಲೂ ಇರುತ್ತಾರೆ, ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲ ಎಂದರು.

NO COMMENTS

LEAVE A REPLY

Please enter your comment!
Please enter your name here

Exit mobile version