ನಮ್ಮ ಸರ್ಕಾರದ ಅವಧಿಯಲ್ಲಿ 1000 ರೂ.ಗೆ ಎರಡು ಸಿಲಿಂಡರ್ ಗಳು ದೊರೆಯುತ್ತಿದ್ದವು: ರಾಹುಲ್ ಗಾಂಧಿ

Prasthutha|

ಹೊಸದಿಲ್ಲಿ: ಅಡುಗೆ ಅನಿಲ ಸಿಲಿಂಡರ್ ಬೆಲೆ 1000 ರೂ. ಗಡಿ ದಾಟಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

- Advertisement -

ಈಗ ಸಿಲಿಂಡರ್ ಬೆಲೆ 1000 ರೂ. ಗಡಿ ದಾಟಿದೆ. ಈ ಬೆಲೆಯಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿ ಎರಡು ಸಿಲಿಂಡರ್ ದೊರೆಯುತ್ತಿದ್ದವು ಎಂದು ರಾಹುಲ್ ಟ್ವೀಟ್ ಮೂಲಕ ಕುಟುಕಿದ್ದಾರೆ.

ಅಡುಗೆ ಅನಿಲ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಟ್ವಿಟ್ ಮಾಡಿರುವ ರಾಹುಲ್ ಗಾಂಧಿ ಅವರು, 2014ಕ್ಕೂ ಹಿಂದಿನ ಬೆಲೆ ಮತ್ತು ಈಗಿನ ಬೆಲೆಯನ್ನು ತುಲನೆ ಮಾಡಿದ್ದಾರೆ. “ಎಲ್ ಪಿಜಿ ಸಿಲಿಂಡರ್ 2014ರಲ್ಲಿ 7410 ಇತ್ತು. 1827 ಸಬ್ಸಿಡಿ ದೊರೆಯುತ್ತಿತ್ತು. ಈಗ ಎಲ್ ಪಿಜಿ 7999 (ದೆಹಲಿ ದರ) ದಾಟಿದೆ. ಶೂನ್ಯ ಸಬ್ಸಿಡಿ ದೊರೆಯುತ್ತಿದೆ. ಭಾರತೀಯ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಕಲ್ಯಾಣಕ್ಕಾಗಿ ಕಾಂಗ್ರೆಸ್ ಆಡಳಿತವೇ ಸೂಕ್ತ. ಇದು ನಮ್ಮ ಆರ್ಥಿಕ ನೀತಿಯೂ ಆಗಿದೆ’ ಎಂದು ಬರೆದುಕೊಂಡಿದ್ದಾರೆ.

Join Whatsapp