ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್

Prasthutha|

ನವದೆಹಲಿ: ಬಸವರಾಜ ಬೊಮ್ಮಾಯಿ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅತ್ಯುತ್ತಮ ಕೆಲಸಗಳನ್ನು ಮಾಡಿದ್ದು, ಅವರ ಬದಲಾವಣೆಯ ಮಾತೇ ಇಲ್ಲ ಎಂದು ಬಿಜೆಪಿಯ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

- Advertisement -

ದೆಹಲಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಬೊಮ್ಮಾಯಿ ರೈತ, ಯುವಜನರ ಪರವಾಗಿ ಅತ್ಯುತ್ತಮ ಕೆಲಸವನ್ನು ಮಾಡಿದ್ದಾರೆ. ಮುಂದಿನ ಕರ್ನಾಟಕ ಚುನಾವಣೆಯನ್ನು ಅವರ ನೇತೃತ್ವದಲ್ಲೇ ಎದುರಿಸಲಿದ್ದೇವೆ ಎಂದರು.

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವಿನ ಒಡಕನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಮುಖ್ಯಮಂತ್ರಿ ಬದಲಾವಣೆ ಎಂಬ ಷಡ್ಯಂತರ ರೂಪಿಸಿದೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ.



Join Whatsapp