ಮಾತುಕತೆ ವಿಫಲ, ಗೋವಾದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯಿಲ್ಲ: ಸಂಜಯ್ ರಾವತ್

Prasthutha: January 19, 2022

ಗೋವಾ: ಮುಂಬರುವ ಮಹತ್ವದ ಪಂಚರಾಜ್ಯ ಚುನಾವಣೆಗಳಲ್ಲಿ ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ ಮಾದರಿಯಲ್ಲಿ ಗೋವಾದಲ್ಲೂ ಕಣಕ್ಕಿಳಿಯಲು ನಿರ್ಧರಿಸಿದ್ದ ಶಿವಸೇನೆ-ಕಾಂಗ್ರೆಸ್ ನಡುವಿನ ಮಾತುಕತೆ ವಿಫಲವಾಗಿದ್ದು, ಎನ್’ಸಿಪಿ ಜೊತೆ ಮೈತ್ರಿಮಾಡಿಕೊಂಡು ಸ್ಪರ್ಧಿಸಲು ಶಿವಸೇನೆ ನಿರ್ಧರಿಸಿದೆ.

ಈ ಕುರಿತು ತಮ್ಮ ನಿರ್ಧಾರ ಪ್ರಕಟಿಸಿರುವ ಶಿವಸೇನೆ ಮುಖಂಡ ಸಂಜಯ್ ರಾವತ್, ‘ ಗೋವಾದಲ್ಲಿ ಮೈತ್ರಿ ಕುರಿತಂತೆ ಕಾಂಗ್ರೆಸ್ ಜೊತೆ ಹಲವು ಸುತ್ತಿನ ಮಾತುಕತೆ ನಡೆಸಲಾಯಿತಾದರೂ ಒಮ್ಮತದ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಶಿವಸೇನೆ-ಎನ್’ಸಿಪಿ ಹಾಗೂ ಕಾಂಗ್ರೆಸ್ ಜೊತೆಯಾಗಿ ಮಹರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ ಮಾದರಿಯಲ್ಲಿ ಗೋವಾದಲ್ಲಿ ಚುನಾವಣೆ ಎದುರಿಸಲು ಸಜ್ಜಾಗಿತ್ತು. ಆದರೆ ಕಾಂಗ್ರೆಸ್ ಏಕಾಂಗಿಯಾಗಿ ಗೋವಾ ರಾಜ್ಯದಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿರುವ ಕಾರಣ ಮೈತ್ರಿಗೆ ಮುಂದಾಗಿಲ್ಲ ಎಂದು ರಾವತ್ ಹೇಳಿದ್ದಾರೆ.  

ಕಾಂಗ್ರೆಸ್ ಹೊರತಾಗಿಯೂ ಶಿವಸೇನೆ ಎನ್’ಸಿಪಿ ಜೊತೆ ಮೈತ್ರಿಮಾಡಿಕೊಂಡು ಗೋವಾದಲ್ಲಿ ಸ್ಪರ್ಧಿಸುವ ಕುರಿತು ಜನವರಿ 16ರಂದು ನಡೆದ ಉಭಯ ಪಕ್ಷಗಳ ನಾಯಕರ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!