ಅವರು ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ ಖರ್ಗೆಯನ್ನೇ: ಸತೀಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು

Prasthutha|

ಬೆಂಗಳೂರು: ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಮತ್ತು ಕೆಪಿಸಿಸಿ ಅಧ್ಯಕ್ಷ ಬದಲಾವಣೆ ವಿಚಾರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಲಿ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗುರುವಾರ ತಿರುಗೇಟು ನೀಡಿದ್ದಾರೆ.

- Advertisement -

ಕಾಂಗ್ರೆಸ್ ನೂತನ ಪ್ರಧಾನ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೆಹಲಿಗೆ ತೆರಳಿದ್ದ ಡಿಕೆ ಶಿವಕುಮಾರ್ ಇಂದು ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ, ಅಧ್ಯಕ್ಷ ಸ್ಥಾನದ ವಿಚಾರ ಸ್ಪಷ್ಟಪಡಿಸಬೇಕಾಗಿರುವುದು ನಾನಲ್ಲ. ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೇಳಲಿ. ಇವರು(ಅಹಿಂದ ನಾಯಕರು) ಪ್ರಶ್ನೆ ಮಾಡುತ್ತಿರುವುದು ನನ್ನನ್ನಲ್ಲ, ಖರ್ಗೆ ಅವರನ್ನು ಎಂದರು.

- Advertisement -

ಸ್ಥಾನ ಮೀಡಿಯಾದಲ್ಲೋ, ಅಂಗಡಿಯಲ್ಲೋ ಎಲ್ಲೋ ಸಿಗಲ್ಲ. ಪಕ್ಷದ ನಾಯಕರು ನಾವು ಮಾಡುವ ಕೆಲಸ ಗುರ್ತಿಸಿ ಯಾರ್ಯಾರಿಗೆ ಏನೋ ಕೊಡಬೇಕು ಕೊಡ್ತಾರೆ. ಮಿಡಿಯಾ ಮುಖಾಂತರ ಯಾರಾದರೂ ಪಾರ್ಟಿ ಹುದ್ದೆ ಕೇಳುತ್ತಾರಾ? ಎಂದರು.



Join Whatsapp