Home ಕರಾವಳಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ ನೇಮಕ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ ನೇಮಕ

ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿಯವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಮಟ್ಟಾರು ರತ್ನಕಾರ ಹೆಗ್ಡೆ ಅವರ ನಾಮ ನಿರ್ದೇಶನವನ್ನು ರದ್ದುಪಡಿಸಲಾಗಿದೆ. ಅವರ ಸ್ಥಾನಕ್ಕೆ ಪುತ್ತೂರು ತಾಲೂಕು ಬಲ್ನಾಡು ಗ್ರಾಮ ಉಜ್ರುಪಾದೆ ಅಂಚೆ ನಿವಾಸಿ ತಿಮ್ಮಪ್ಪ ಶೆಟ್ಟಿ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ತಿಳಿಸಿದ್ದಾರೆ.

ತಾ.ಪಂ.ಅಧ್ಯಕ್ಷ, ಬಿಜೆಪಿ ಪುತ್ತೂರು ಮಂಡಲ ಅಧ್ಯಕ್ಷ ಹಾಗೂ ಕ್ಯಾಂಪ್ಕೋ ನಿರ್ದೇಶಕರಾಗಿ ತಿಮ್ಮಪ್ಪ ಶೆಟ್ಟಿಯವರು ಕಾರ್ಯ ನಿರ್ವಹಿಸಿದ್ದಾರೆ.

Join Whatsapp
Exit mobile version