ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಹೆಸರು ನಾಮಕರಣಕ್ಕೆ ಚಿಂತನೆ: ಸಿಎಂ ಸಿದ್ದರಾಮಯ್ಯ

Prasthutha|

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಗೆ ಜಮೀನು ಕೊಟ್ಟಿದ್ದು ದೇವರಾಜ ಅರಸು ಹಾಗಾಗಿ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಹೆಸರು ಇಡಲು ಚಿಂತನೆ ಮಾಡಿದ್ದೇನೆ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -

ಈ ಕುರಿತು ಮಾತನಾಡಿದ ಅವರು ಬೆಂಗಳೂರಿಗೆ ಸಿಲಿಕನ್ ವ್ಯಾಲಿ ಅಂತ ಹೆಸರು ಬಂದಿದೆ ಅಂದರೇ ಅದಕ್ಕೆ ದೇವರಾಜ ಅರಸು ಅವರ ಕೊಡುಗೆಯೂ ಇದೆ ಎಂದರು.

ದೇವರಾಜ ಅರಸು ಅವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾಜಿ ವಿಧಾನಸಭಾ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅವರಿಗೆ ಪ್ರಶಸ್ತಿ ನೀಡಲಾಗಿದ್ದು, ಗೇಣಿದಾರರಿಗೆ ಮಾಲಿಕತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಂದಿದ್ದು ಅರಸು. ಮಾಜಿ ವಿಧಾನಸಭಾ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ಇದರ ಹೋರಾಟ ಮಾಡಿದರು ಎಂದರು.



Join Whatsapp