ಅರೇಬಿಕ್ ಶಾಲೆಗಳ ಸುಧಾರಣೆಗೆ ಚಿಂತನೆ: ಬಿ.ಸಿ.ನಾಗೇಶ್

Prasthutha|

ಬೆಂಗಳೂರು: ಅರೇಬಿಕ್ ಶಾಲೆಗಳ ಮಕ್ಕಳೂ ಇತರರಂತೆ ಉತ್ತಮ ಶಿಕ್ಷಣ ಪಡೆಯಬೇಕೆಂಬ ಉದ್ದೇಶದಿಂದ ರಾಜ್ಯದಲ್ಲಿರುವ ಎಲ್ಲ ಅರೇಬಿಕ್ ಶಾಲೆಗಳ ಬೋಧನೆ ಕುರಿತು ವರದಿ ಕೇಳಲಾಗಿದೆ ಎಂದು  ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 106 ಅನುದಾನಿತ ಅರೇಬಿಕ್ ಶಾಲೆಗಳು ಇವೆ. 80 ಅನುದಾನ ರಹಿತ ಶಾಲೆಗಳಿವೆ. ಇಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮದ ಅನುಸಾರ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದರಿಂದ ಈ ಕುರಿತು ಪರಿಶೀಲಿಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಇಂತಹ ಶಾಲೆಗಳಿಗೆ ಪ್ರತಿವರ್ಷ ಸುಮಾರು 27 ಸಾವಿರ ಸಂಖ್ಯೆಯ ಮಕ್ಕಳು ಸೇರುತ್ತಾರೆ. ಆದರೆ, ಎಸ್ಸೆಸ್ಸೆಲ್ಸಿಯಲ್ಲಿ ಕೇವಲ 2 ಸಾವಿರ ವಿದ್ಯಾರ್ಥಿಗಳು ಮಾತ್ರವೇ ಇರುತ್ತಾರೆ. ಬೇರೆ ಅನುದಾನಿತ ಶಾಲೆಗಳ ರೀತಿಯಲ್ಲಿ ಅರೇಬಿಕ್ ಶಾಲೆಗಳೂ ಶಿಕ್ಷಣ ನೀಡಬೇಕು. ಆದರೆ, ಬಹಳಷ್ಟು ಶಾಲೆಗಳಲ್ಲಿ ಭಾಷೆ ಮತ್ತು ವಿಜ್ಞಾನದ ಕಲಿಕೆ ಆಗುತ್ತಿಲ್ಲ. ಎಲ್ಲರಿಗೂ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಶಿಕ್ಷಣ ದೊರಕಬೇಕು ಎಂದು ಹೇಳಿದರು.



Join Whatsapp