ಬೆಂಗಳೂರು: ಬೆಂಗಳೂರಿನ ಲಾಡ್ಜ್ವೊಂದರಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ಜಕ್ಕಣ್ಣಗೌಡರ ಮೃತ ತಹಶೀಲ್ದಾರ್.
ಜಕ್ಕಣ್ಣಗೌಡ ಅವರು ಕೋರ್ಟ್ ಕೆಲಸಕ್ಕೆಂದು ಬೆಂಗಳೂರಿಗೆ ಆಗಮಿಸಿ ಕಪಾಲಿ ಥಿಯೇಟರ್ ಸಮೀಪದ ವೈಭವ್ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದರು. ಆದ್ರೆ, ಇಂದು (ಅಕ್ಟೋಬರ್ 16) ರಾತ್ರಿ 9ರ ಸುಮಾರಿಗೆ ಅವರು ರೂಮ್ನಲ್ಲಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಒಂದೆಡೆ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದರೆ ಮತ್ತೊಂದೆಡೆ ಈ ಸಾವಿನ ಸುತ್ತ ಅನುಮಾನಗಳು ಹುಟ್ಟಿಕೊಂಡಿವೆ.
ಇನ್ನು ತೀರ್ಥಹಳ್ಳಿಯ ಹಶೀಲ್ದಾರ್ ಜಕ್ಕಣ್ಣಗೌಡರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಬೆಂಗಳೂರಿನಲ್ಲಿದ್ದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಕೂಡಲೇ ಲಾಡ್ಜ್ ಆಗಮಿಸಿದ್ದಾರೆ. ಹಾಗೇ ಸ್ಥಳಕ್ಕೆ ಇನ್ನು ಉಪ್ಪಾರ ಪೇಟೆ ಪೊಲೀಸ್ ಠಾಣೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆ ಮಾಡಿದ ಬಳಿಕ ಸಾವಿನ ಸತ್ಯಾಸತ್ಯತೆ ತಿಳಿಯಲಿದೆ.