ಈ ದೇಶವನ್ನು ಕೇವಲ ಹಿಂದೂ ರಾಷ್ಟ್ರವನ್ನಾಗಿ ಮಾಡಲಾಗದು: ಸಿದ್ದರಾಮಯ್ಯ

Prasthutha|

ಗದಗ: ಈ ದೇಶವನ್ನು ಕೇವಲ ಹಿಂದೂ ರಾಷ್ಟ್ರವನ್ನಾಗಿ ಮಾಡಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಶ್ರೀರಾಮಮಂದಿರ ಉಳಿಯಬೇಕಾದರೆ ಹಿಂದೂ ರಾಷ್ಟ್ರ ಆಗಬೇಕು ಎಂಬ ಉಡುಪಿ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಸಿಎಂ ಹೀಗೆ ಹೇಳಿದ್ದಾರೆ.

- Advertisement -

ಗದಗದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಅವರು ಭಾರತವನ್ನು ಕೇವಲ ಹಿಂದೂ ರಾಷ್ಟ್ರ ಮಾತ್ರ ಮಾಡಲಾಗುವುದಿಲ್ಲ. ಇಲ್ಲಿ ಎಲ್ಲಾ ಧರ್ಮದವರೂ ಇದ್ದಾರೆ ಎಂದು ಹೇಳಿದ್ದಾರೆ.

ಈ ದೇಶ ಹಿಂದೂ ರಾಷ್ಟ್ರ ಆಗಬೇಕೆಂಬುದು ಬಿಜೆಪಿಯವರ ಸಿದ್ಧಾಂತ. ನಮ್ಮ ದೇಶದಲ್ಲಿ ಕ್ರಿಶ್ಚಿಯನ್, ಮುಸ್ಲಿಂ, ಬೌದ್ಧ, ಜೈನರು ಸಹ ಇದ್ದಾರೆ. 1950ರಲ್ಲಿ ಜನಸಂಘ ಸ್ಥಾಪಿಸಿ ಹಿಂದೂ ರಾಷ್ಟ್ರ ಮಾಡುತ್ತೇವೆ ಅಂದರು. 1925ರಲ್ಲಿ ಹೆಡ್ಗೇವಾರ್​ ಆರ್​ಎಸ್​​ಎಸ್​ ಸ್ಥಾಪನೆ ಮಾಡಿದ್ದರು. ಈ ಬಗ್ಗೆ ಬಿಜೆಪಿಯವರನ್ನು ಕೇಳಿ, ಅವರಿಗೆ ಇವೆಲ್ಲವೂ ಗೊತ್ತೇ ಇಲ್ಲ. ಬಿಜೆಪಿಯವರು ಸುಮ್ಮನೆ ಬುರುಡೆ ಬಿಡುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು.



Join Whatsapp