ಸನಾತನ ಧರ್ಮ ನಿಂದಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಕ್ಕೆ ಈ ಚುನಾವಣೆಯೇ ಸಾಕ್ಷಿ: ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್

Prasthutha|

ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಸರ್ಕಾರ ರಚಿಸಲಿದೆ. ಹಾಗೆಯೇ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.

- Advertisement -

ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್, ಸನಾತನ ಧರ್ಮವನ್ನು ನಿಂದನೆ ಮಾಡಿದ ಪರಿಣಾಮ ಕಾಂಗ್ರೆಸ್ ನೆಲಕಚ್ಚಿದೆ ಎಂದಿದ್ದಾರೆ. “ಸನಾತನ ಧರ್ಮವನ್ನು ದುರುಪಯೋಗಪಡಿಸಿಕೊಂಡರೆ, ನಿಂದಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದಕ್ಕೆ ಈ ಚುನಾವಣೆಯೇ ನಿದರ್ಶನ. ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿಗೆ ಅಭಿನಂದನೆಗಳು. ಈ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಾಯಕತ್ವಕ್ಕೆ ಹಿಡಿದ ಕನ್ನಡಿ. ತಳಮಟ್ಟದಲ್ಲಿ ಅದ್ಭುತ ಕೆಲಸ ಮಾಡಿದ ಪಕ್ಷದ ಕಾರ್ಯಕರ್ತರ ಶ್ರಮದ ಫಲ” ಎಂದು ಪೋಸ್ಟ್ ಮಾಡಿದ್ದಾರೆ.

Join Whatsapp