ಬಿಜೆಪಿಯ ಹರಕೆಯ ಕುರಿ – ವರುಣಾದ ಮನೆ ಮಗನ ನಡುವಿನ ಚುನಾವಣೆ ಇದು: ಸಿದ್ದರಾಮಯ್ಯ

Prasthutha|

ಬೆಂಗಳೂರು: ನಾನು ವರುಣಾ ಕ್ಷೇತ್ರದಲ್ಲಿ ಹುಟ್ಟಿ ಬೆಳೆದ, ಇಲ್ಲಿನ ಮಣ್ಣಿನ ಮಗ. ಇವ ನಮ್ಮವ ಎಂಬ ಭಾವನೆ ಇಲ್ಲಿನ ಜನರಲ್ಲಿದೆ. ಈ ಹಿಂದೆ ವರುಣಾವನ್ನು ಪ್ರತಿನಿಧಿಸಿದಾಗೆಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ದುಡಿದಿದ್ದೇನೆ. ನನ್ನ ಸಾಧನೆಗಳು ಇಲ್ಲಿನ ಜನರ ಬದುಕಿನಲ್ಲಿದೆ. ನನ್ನ ಗೆಲುವಿಗೆ ಇದಕ್ಕಿಂತ ಹೆಚ್ಚೇನು ಬೇಕು? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -


ರಾಮನಗರ ಮೂಲದ, ಬೆಂಗಳೂರು ನಗರದಲ್ಲಿ ರಾಜಕೀಯ ಮಾಡಿಕೊಂಡಿದ್ದ ಸೋಮಣ್ಣನವರನ್ನು ಬಿಜೆಪಿಯವರು ಒತ್ತಾಯಪೂರ್ವಕವಾಗಿ ವರುಣಾಕ್ಕೆ ಕರೆತಂದು ಕಣಕ್ಕಿಳಿಸಿದೆ. ಬಿಜೆಪಿಯ ಹರಕೆಯ ಕುರಿ ಮತ್ತು ವರುಣಾದ ಮನೆ ಮಗನ ನಡುವಿನ ಚುನಾವಣೆ ಇದು. ಹಣಕ್ಕೆ ಮರುಳಾಗಿ ತಮ್ಮವರನ್ನು ಕೈಬಿಡುವವರಲ್ಲ ನನ್ನ ಜನ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Join Whatsapp