ಇದು ನನ್ನ ಕೊನೆಯ ಚುನಾವಣೆ: ಜಗದೀಶ್ ಶೆಟ್ಟರ್ ಘೋಷಣೆ

Prasthutha|

ಹುಬ್ಬಳ್ಳಿ: ಇದು ನನ್ನ ಕೊನೆಯ ಚುನಾವಣೆ, ನನ್ನನ್ನು ರಾಜಕೀಯವಾಗಿ ಮುಗಿಸಲು ಕೆಲವರಿಂದ ಷಡ್ಯಂತ್ರವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕರಪತ್ರದ ಮೂಲಕ ಘೋಷಣೆ ಮಾಡಿದ್ದಾರೆ.

- Advertisement -


ನಾನು ಏಳನೇ ಬಾರಿ ಚುನಾವಣೆ ಎದುರಿಸುತ್ತಿದ್ದು, ಈ ಬಾರಿಯೂ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಕೆಟ್ಟು ಹೋಗಿರುವ ವ್ಯವಸ್ಥೆ ಸರಿಪಡಿಸುವ ಉದ್ದೇಶ ಇದೆ ಎಂದಿದ್ದಾರೆ.


ಇನ್ನು ರಾಜಕೀಯವಾಗಿ ನನ್ನನ್ನು ಮುಗಿಸಲು ಬಿಜೆಪಿ ಪಕ್ಷದಲ್ಲಿಯೇ ಕೆಲವರು ಷಡ್ಯಂತ್ರ ರೂಪಿಸಿದ್ದಾರೆ ಎಂದು ಜಗದೀಶ್ ಶೆಟ್ಟರ್ ಕರಪತ್ರದಲ್ಲಿ ಆರೋಪ ಮಾಡಿದ್ದಾರೆ.