Home ಟಾಪ್ ಸುದ್ದಿಗಳು ರಾಜ್ಯದಲ್ಲಿ ಬುಲ್ಡೋಜರ್ ಕಾನೂನು ತರಲು ಇದು ಉತ್ತರ ಪ್ರದೇಶ ಅಲ್ಲ: ಡಿಕೆಶಿ

ರಾಜ್ಯದಲ್ಲಿ ಬುಲ್ಡೋಜರ್ ಕಾನೂನು ತರಲು ಇದು ಉತ್ತರ ಪ್ರದೇಶ ಅಲ್ಲ: ಡಿಕೆಶಿ

ದಾವಣಗೆರೆ : ರಾಜ್ಯದಲ್ಲಿ ಬುಲ್ಡೋಜರ್ ಕಾನೂನು ತರೋಕೆ ಇದು ಗೂಂಡಾರಾಜ್ ಉತ್ತರ ಪ್ರದೇಶ ಅಲ್ಲ. ಕರ್ನಾಟಕವನ್ನು ಯುಪಿಗೆ ಹೋಲಿಸಬೇಡಿ. ಕರ್ನಾಟಕದಲ್ಲಿ ಪ್ರಜ್ಞಾವಂತರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಯಾಕಾದ್ರು ಬಂದಿದೆ ಎಂದು ಜನ ಕೊರಗುತ್ತಿದ್ದಾರೆ. ಬಿಜೆಪಿಯವರು ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಅವರು ಜನಾದೇಶದಿಂದ ಅಧಿಕಾರಕ್ಕೆ ಬಂದಿಲ್ಲ. ಶಾಸಕರನ್ನು ಖರೀದಿ ಮಾಡಿ ಅಧಿಕಾರ ನಡೆಸುತ್ತಿದ್ದಾರೆ. ಇದನ್ನು ಸದನದಲ್ಲೇ ಶಾಸಕ ಶ್ರೀನಿವಾಸಗೌಡ ಒಪ್ಪಿಕೊಂಡಿದ್ದಾರೆ. ಆಪರೇಷನ್ ಕಮಲದಿಂದ ಬಿಜೆಪಿ ಸರ್ಕಾರ ಜನ್ಮ ತಾಳಿದೆ. ಹೀಗಾಗಿ ಔಷಧಿ, ಗೊಬ್ಬರ, ನೇಮಕಾತಿ ಎಲ್ಲದರಲ್ಲೂ ದುಡ್ಡು ಹೊಡೆಯುತ್ತಿದ್ದಾರೆ ಎಂದರು.

ಹಲಾಲ್ ಕುರಿತು ವಿವಾದ ಮಾಡಿದ್ದು ಬಿಜೆಪಿಯವರೇ. ನಮ್ಮ ಭಾಗದಲ್ಲಿ ಕಬ್ಬಾಳಮ್ಮ ದೇವಸ್ಥಾನ ಇದೆ ಅಲ್ಲಿ ಸಾವಿರ ಕುರಿ ಕಡಿಯುತ್ತಾರೆ. ಕಡಿದಿದ್ದ ಕುರಿಗಳನ್ನು ಮುಸ್ಲಿಂರೇ ಕ್ಲಿನ್ ಮಾಡುತ್ತಾರೆ. ಚಿತ್ರದುರ್ಗದಲ್ಲಿ ಕುರಿಗಳ ವ್ಯಾಪಾರ ಆಗುತ್ತಿಲ್ಲ ಎನ್ನುವ ವರದಿ ನೋಡಿದೆ, 8 ಸಾವಿರಕ್ಕೆ ಮಾರಾಟವಾಗುತ್ತಿದ್ದ ಕುರಿಗಳು 3-4 ಸಾವಿರಕ್ಕೆ ಮಾರುತ್ತಿದ್ದಾರೆ. ಈಗ ಬಿಜೆಪಿಯವರು ಕುರಿಗಳನ್ನು ತಗೊಂಡು ಹೋಗುತ್ತಾರಾ?. ಇದರ ಪರಿಣಾಮ ಸಂತೆ, ಜಾತ್ರೆಗಳ ಮೇಲೆ ಬಿದ್ದಿದೆ ಎಂದು ಕಿಡಿಕಾರಿದರು.

Join Whatsapp
Exit mobile version