ಬೆಂಗಳೂರು : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
`ಗುಜರಾತಿನ ವಡೋದರದ ಬೀದಿಯಲ್ಲಿ ಅಲ್ಪಸಂಖ್ಯಾತ ಗರ್ಭಿಣಿ ಮಹಿಳೆಯ ಹೊಟ್ಟೆಗೆ ತ್ರಿಶೂಲ ಚುಚ್ಚಿ ಮೆರವಣಿಗೆ ಮಾಡಿದಾಗ ಮೌನವಹಿಸಿದ್ದು ಇದೇ 56 ಇಂಚಿನ ಎದೆ. ಇಂದು ಮಣಿಪುರದ ಬೀದಿಯಲ್ಲಿ ಮಹಿಳೆಯರ ನಗ್ನ ಮೆರವಣಿಗೆ ನಡೆಸಿ ಸಾಮೂಹಿಕ ಅತ್ಯಾಚಾರ ಎಸೆಯುವಾಗಲೂ 56 ಇಂಚಿನ ಎದೆಯಲ್ಲಿ ಮತ್ತದೇ ಮೌನ.! ಮೌನಂ ಸಮ್ಮತಿ ಲಕ್ಷಣಂ..!!’’ ಎಂದು ಮೋದಿಯವರ ಹೆಸರೆತ್ತದೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.