ಕೋಲ್ಕತ್ತಾ: ಅನ್ಯಾಯವಾಗಿ ಬಂಧಿಸಲ್ಪಟ್ಟು ಜೈಲು ಶಿಕ್ಷೆ ಅನುಭವಿಸುತ್ತಿರುವವರನ್ನು ಬೆಂಬಲಿಸಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಟ್ವೀಟ್ ಮಾಡಿದ್ದು, ಇದು ಸಿದ್ದಿಕ್ ಕಾಪ್ಪನ್, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರದ್ದೂ ಗಣರಾಜ್ಯ ಎಂದು ಹೇಳಿದ್ದಾರೆ.
ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ವರದಿ ಮಾಡಲು ತೆರಳಿದ್ದಕ್ಕಾಗಿ UAPA ಕಾಯ್ದೆಯಡಿ ಜೈಲುಶಿಕ್ಷೆ ಅನುಭವಿಸುತ್ತಿರುವ ಕೇರಳ ಮೂಲದ ಪತ್ರಕರ್ತ ಸಿದ್ದಿಕ್ ಕಾಪ್ಪನ್, ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ UAPA ಕಾಯ್ದೆಯಡಿ ಜೈಲು ಸೇರಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಅವರ ಹೆಸರನ್ನು ಉಲ್ಲೇಖಿಸಿ ಮಹುವಾ ಮೊಯಿತ್ರಾ ಟ್ವೀಟ್ ಮಾಡಿದ್ದಾರೆ.
‘ನಮ್ಮ ಗಣರಾಜ್ಯಕ್ಕೆ ಜನ್ಮದಿನದ ಶುಭಾಶಯಗಳು. ಆದರೆ ಇದು ಸಿದ್ದಿಕ್ ಕಾಪ್ಪನ್, ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರದ್ದೂ ಗಣರಾಜ್ಯವಾಗಿದೆ ಎಂದು ಮಹುವಾ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.