2 ನೇ ಡೋಸ್ ಪಡೆದ 18 ವರ್ಷ ಮೇಲ್ಪಟ್ಟ ವರಿಗೆ ಬೂಸ್ಟರ್ ಡೋಸ್ ಪಡೆಯಲು ಅವಕಾಶ

Prasthutha|

ಹೊಸದಿಲ್ಲಿ: ಕೋವಿಡ್ ಲಸಿಕೆಯ ಎರಡನೇ ಡೋಸ್ ಲಸಿಕೆ ಪಡೆದು 9 ತಿಂಗಳ ಅವಧಿ ಪೂರೈಸಿದ 18 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಬೂಸ್ಟರ್ ಡೋಸ್ ಪಡೆಯಲು ಅರ್ಹರಾಗಿದ್ದು, ಈ ವ್ಯವಸ್ಥೆಯು ಏಪ್ರಿಲ್ 10 ರವಿವಾರದಿಂದ ಎಲ್ಲಾ ಖಾಸಗಿ ಆಸ್ಪತ್ರೆ ಮತ್ತು ಗಳಲ್ಲಿ ಲಸಿಕಾ ಕೇಂದ್ರಗಳಲ್ಲಿ ಲಭ್ಯವಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

- Advertisement -

ಮೊದಲ ಮತ್ತು ಎರಡನೇ ಡೋಸ್‌ಗಳಿಗೆ ಸರ್ಕಾರಿ ಲಸಿಕೆ ಕೇಂದ್ರಗಳ ಮೂಲಕ ನಡೆಯುತ್ತಿರುವ ಉಚಿತ ಲಸಿಕೆ ಕಾರ್ಯಕ್ರಮ ಮುಂದುವರಿಯುತ್ತದೆ. ದೇಶದಲ್ಲಿ ಈವರೆಗೆ, ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರಿಗೆ ಮತ್ತು 60+ ಜನಸಂಖ್ಯೆಯ ಗುಂಪಿಗೆ 2.4 ಕೋಟಿಗೂ ಹೆಚ್ಚು ಮುನ್ನೆಚ್ಚರಿಕೆ ಡೋಸ್‌ಗಳನ್ನು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೇಶದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಇದುವರೆಗೆ ಶೇ.96 ಜನರು ಕನಿಷ್ಠ ಒಂದು ಡೋಸ್ ಲಸಿಕೆ ಪಡೆದಿದ್ದಾರೆ. ಶೇ.83ರಷ್ಟು ಮಂದಿ ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ.

Join Whatsapp
Exit mobile version