Home ಟಾಪ್ ಸುದ್ದಿಗಳು ಕಲಾವಿದರ ಬಳಿ ಕಮಿಷನ್ ಕೇಳಿದವರು ಲಕ್ವಾ ಹೊಡೆದು ಸಾಯುತ್ತಾರೆ: ಈಶ್ವರಪ್ಪ

ಕಲಾವಿದರ ಬಳಿ ಕಮಿಷನ್ ಕೇಳಿದವರು ಲಕ್ವಾ ಹೊಡೆದು ಸಾಯುತ್ತಾರೆ: ಈಶ್ವರಪ್ಪ

ಶಿವಮೊಗ್ಗ: ಮೈಸೂರು ದಸರಾ ಸಾಂಸ್ಕೃತಿಕ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಅಂತಾರಾಷ್ಟ್ರೀಯ ಖ್ಯಾತೀಯ ಸರೋದ್​ ವಾದಕ ಪಂ. ರಾಜೀವ ತಾರಾನಾಥ ಅವರ ಬಳಿಯೇ ಅಧಿಕಾರಿಗಳು ಕಮಿಷನ್ ಕೇಳಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಕಲಾವಿದರ ಬಳಿ ಕಮಿಷನ್ ಕೇಳಿದವರು ಮತ್ತು ಅವರ ಮಕ್ಕಳು ಲಕ್ವಾ ಹೊಡೆದು ಸಾಯುತ್ತಾರೆ ಎಂದು ಹೇಳಿದ್ದಾರೆ.

ಕಲಾವಿದರ ಬಳಿ ಲಂಚದ ಆಮಿಷದ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಂಸದ ಡಿಕೆ ಸುರೇಶ್ ವಿರುದ್ಧ ತನಿಖೆ ಆಗಬೇಕು. ಕಲಾವಿದರ ಬಳಿ ಕಮೀಷನ್ ಕೇಳುವ ಮೂಲಕ ಅವಮಾನ ಮಾಡಿದ್ದಾರೆ. ಇವರು ಮತ್ತು ಇವರ ಮಕ್ಕಳು ಲಕ್ವಾ ಹೊಡೆದು ಸಾಯುತ್ತಾರೆ ಎಂದರು.

Join Whatsapp
Exit mobile version