ಪತ್ನಿ ಮಕ್ಕಳ ಎದುರು ಧರ್ಮಗುರುಗಳ ಮೇಲೆ ಹಲ್ಲೆ ಮಾಡಿದವರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ: ಎಸ್.ಡಿ.ಪಿ.ಐ

Prasthutha|

ಮಡಿಕೇರಿ: ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕಾಕೋಟುಪರಂಬಿನಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಧರ್ಮಗುರುಗಳ ಮೇಲೆ ಪತ್ನಿ, ಮಕ್ಕಳ ಮುಂದೆಯೇ ಹಲ್ಲೆ ಮಾಡಿರುವವರನ್ನು ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಎಸ್.ಡಿ.ಪಿ.ಐ ಪಕ್ಷದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹನೀಫ್ ಕೊಂಡಂಗೇರಿ ಒತ್ತಾಯಿಸಿದ್ದಾರೆ.

ಕೊಡಗಿಗೆ ಆಗಮಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ರಕ್ಷಣೆ ಕೊಡಲು ಸಾಧ್ಯವಾಗದ ಪೊಲೀಸ್ ಇಲಾಖೆಯು ಯಾವ ರೀತಿಯಲ್ಲಿ ಜನ ಸಾಮಾನ್ಯರಿಗೆ ರಕ್ಷಣೆ ನೀಡುತ್ತದೆ ಎಂಬ ಭಯ ಜನಸಾಮಾನ್ಯರಲ್ಲಿ ಮೂಡಿದೆ. ಜಿಲ್ಲೆಯಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

- Advertisement -