ವಿನೇಶ್‌ ಫೋಗಟ್ ಕುರಿತು ಟೀಕೆ ಮಾಡಿದವರಿಗೆ ಉತ್ತರ ಸಿಕ್ಕಿದೆ: ರಾಹುಲ್ ಗಾಂಧಿ

Prasthutha|

ನವದೆಹಲಿ: ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ 50 ಕೆ.ಜಿ. ವಿಭಾಗದ ಸೆಮಿಫೈನಲ್‌ ಪಂದ್ಯದಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಝ್ಮನ್ ಲೋಪೆಝ್ ಅವರನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದ ವಿನೇಶ್‌ ಫೋಗಟ್‌ಗೆ ಅಭಿನಂದನೆ ಸಲ್ಲಿಸಿದ ಲೋಕ ಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ, ವಿನೀಶ್‌ ಕುರಿತು ಟೀಕೆ ಮಾಡಿದವರಿಗೆ ಉತ್ತರ ಸಿಕ್ಕಿದೆ ಎಂದು ಹೇಳಿದ್ದಾರೆ.

- Advertisement -

ವಿಶ್ವದ ಮೂವರು ಅಗ್ರ ಗಣ್ಯ ಕುಸ್ತಿಪಟುಗಳನ್ನು ಒಂದೇ ದಿನದಲ್ಲಿ ಸೋಲಿಸಿದ ವಿನೇಶ್‌ ಜೊತೆಗೆ ಇಡೀ ದೇಶವೇ ಭಾವುಕವಾಗಿದೆ ಎಂದು ಹೇಳಿದ್ದಾರೆ.

ಫೋಗಟ್ ಟೀಕೆ ಮಾಡಿದ್ದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರಾಹುಲ್, ವಿನೇಶ್‌ ಮತ್ತು ಅವರ ಸಹೋದ್ಯೋಗಿಗಳ ಹೋರಾಟಗಳನ್ನು ಹತ್ತಿಕ್ಕುವವರು, ಅವರ ಉದ್ದೇಶ ಮತ್ತು ಸಾಮರ್ಥ್ಯದ ಬಗ್ಗೆ ಪ್ರಶ್ನೆ ಮಾಡುವವರಿಗೆ ಫೋಗಟ್ ಸಾಧನೆಯಿಂದ ಉತ್ತರಗಳು ಸಿಕ್ಕಿವೆ ಎಂದು ಹೇಳಿದ್ದಾರೆ.

- Advertisement -

ಚಾಂಪಿಯನ್‌ಗಳ ಗುರುತು ತಮ್ಮ ಕಾರ್ಯ ಕ್ಷೇತ್ರದಿಂದ ಉತ್ತರಗಳನ್ನು ನೀಡುತ್ತಾರೆ. ವಿನೀಶ್ ಅವರಿಗೆ ಶುಭಾಶಯಗಳು. ಪ್ಯಾರಿಸ್‌ನಲ್ಲಿ ನಿಮ್ಮ ಯಶಸ್ಸಿನ ಪ್ರತಿಧ್ವನಿ ದಿಲ್ಲಿಗೆ ಸ್ಪಷ್ಟವಾಗಿ ಕೇಳಿಸಿದೆ ಎಂದು ತಮ್ಮ X ಪೋಸ್ಟ್‌ ನಲ್ಲಿ ರಾಹುಲ್ ತಿಳಿಸಿದ್ದಾರೆ.

ವಿನೇಶ್‌ ಫೋಗಟ್ ಭಾರತದ ಫೆಡರೇಷನ್​ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಕುಸ್ತಿಪಟುಗಳೊಂದಿಗೆ ಪ್ರತಿಭಟನೆ ನಡೆಸಿ ನಡು ರಸ್ತೆಯಲ್ಲೇ ಪೊಲೀಸರಿಂದ ಲಾಠಿ ಏಟು ತಿಂದು ಬಂಧನಕ್ಕೆ ಒಳಗಾಗಿದ್ದರು. ಅಸಹಾಯತೆಯಿಂದ ಕಣ್ಣೀರು ಹಾಕಿದ್ದರು. ಪ್ರತಿಭಟನೆಗೆ ಕೇಂದ್ರ ಸರ್ಕಾರ ಯಾವುದೇ ರೀತಿಯಲ್ಲಿ ಸಹಕರಿಸದೇ ಇದ್ದಾಗ ಪ್ರಧಾನಿ ಮೋದಿಗೆ ಪತ್ರ ಬರೆದು ತಮಗೆ ಲಭಿಸಿದ್ದ ದೇಶದ ಪರಮೋಚ್ಚ ಕ್ರೀಡಾ ಪ್ರಶಸ್ತಿಯಾದ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನ ಮತ್ತು ಅರ್ಜುನ ಪ್ರಶಸ್ತಿಯನ್ನು ರಾಷ್ಟ್ರ ರಾಜಧಾನಿಯ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿಟ್ಟು ತೊರೆದಿದ್ದರು. ಈ ಸಂದರ್ಭದಲ್ಲಿ ವಿನೇಶ್‌ ಅವರ ವಿರುದ್ಧ ಟೀಕೆ ಮಾಡಲಾಗಿತ್ತು.

ಭಾರತದ ಮಹಿಳಾ ಕುಸ್ತಿಪಟು ವಿನೇಶ್‌ ಫೋಗಟ್ ​ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಫೈನಲ್​ ಪ್ರವೇಶಿಸುವ ಮೂಲಕ ದೇಶಕ್ಕೆ ಐತಿಹಾಸಿಕ ಪದಕವೊಂದನ್ನು ಖಾತ್ರಿಪಡಿಸಿದ್ದಾರೆ.

ಆದರೆ ಪುರುಷರ ಹಾಕಿ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಜರ್ಮನಿ ತಂಡದ ವಿರುದ್ಧ 2-3 ಅಂತರದಿಂದ ವೀರೋಚಿತ ಸೋಲುಂಡಿದೆ.



Join Whatsapp