Home ಟಾಪ್ ಸುದ್ದಿಗಳು ಸೋತು ಸುಣ್ಣವಾದವರು, ನಮ್ಮ ಸರ್ಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯ

ಸೋತು ಸುಣ್ಣವಾದವರು, ನಮ್ಮ ಸರ್ಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿತ್ತು. ಸದ್ಯ ಇದೇ ವಿಚಾರವನ್ನು ಇಟ್ಟುಕೊಂಡು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕ ವ್ಯಂಗ್ಯವಾಡಿದೆ.

ಬಿಜೆಪಿಯಲ್ಲಿ ಸೋತು ಸುಣ್ಣವಾದವರು, ರಿಟೈರ್ಮೆಂಟ್ ತೆಗೆದುಕೊಂಡವರು, ಮನೆಯಲ್ಲಿ ಕೂತವರು, ಕೆಲಸಕ್ಕೆ ಬಾರದವರೇ ನಮ್ಮ ಸರ್ಕಾರದ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಒಬ್ಬನೇ ಒಬ್ಬ ವ್ಯಕ್ತಿ ವಿಪಕ್ಷ ನಾಯಕ ಸಿಗಲಿಲ್ಲವೇ ಬಿಜೆಪಿಯಲ್ಲಿ? ನಾಯಕರೇ ಇಲ್ಲದ ಬಿಜೆಪಿಗೆ ವಿಪಕ್ಷ ನಾಯಕ ಸಿಗುವುದಾದರೂ ಎಲ್ಲಿಂದ ಎಂದು ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ ಘಟಕ ವ್ಯಂಗ್ಯವಾಡಿದೆ.

Join Whatsapp
Exit mobile version