ದೆಹಲಿ: ರಾಮಮಂದಿರ ಉದ್ಘಾಟನಾ ಕಾರ್ಯಕ್ರಮವನ್ನು ಕಾಂಗ್ರೆಸ್ ಬಹಿಷ್ಕರಿಸುವ ವಿವಾದವು ಬಿಜೆಪಿಯ ಪಿತೂರಿಯೇ ಹೊರತು ಬೇರೇನೂ ಅಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು ಉದ್ದೇಶವಲ್ಲ ಆದರೆ ರಾಜಕೀಯ ಉದ್ದೇಶ ಹೊಂದಿರುವ ಬಿಜೆಪಿ/ಆರ್ ಎಸ್ ಎಸ್ ಕಾರ್ಯಕ್ರಮವನ್ನು ತಿರಸ್ಕರಿಸುವುದು ಕಾಂಗ್ರೆಸ್ ಉದ್ದೇಶವಾಗಿದೆ ಎಂದು ಈಗಾಗಲೇ ತನ್ನ ನಿಲುವನ್ನು ವ್ಯಕ್ತಪಡಿಸಿದ್ದೇನೆ ಎಂದರು.
ರಾಮನ ಮೇಲೆ ನಂಬಿಕೆ ಇರುವವರು ಯಾವಾಗ ಬೇಕಾದರೂ ಅಯೋಧ್ಯೆಗೆ ಭೇಟಿ ನೀಡಬಹುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.