ಕಾಂಗ್ರೆಸ್​ ಪಕ್ಷದ ಯೋಜನೆಗಳ ಲಾಭ ಪಡೆದುಕೊಂಡವರೇ ನಮ್ಮನ್ನು ವಿರೋಧಿಸುತ್ತಿದ್ದಾರೆ: ಪರಮೇಶ್ವರ್

Prasthutha|

ತುಮಕೂರು: ಕಾಂಗ್ರೆಸ್​ ನ ಯೋಜನೆಗಳ ಲಾಭ ಪಡೆದುಕೊಂಡವರೇ ನಮ್ಮನ್ನು ವಿರೋಧ ಮಾಡುತ್ತಿದ್ದಾರೆ ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

- Advertisement -

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜೀವ್ ಗಾಂಧಿ 18 ವರ್ಷದವರಿಗೆ ಮತದಾನದ ಹಕ್ಕು ನೀಡಿದ್ದರು. ಕಾಂಗ್ರೆಸ್ ಬಡವರ ಪರವಾಗಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್​ ನವರು ಅಲ್ಪಸಂಖ್ಯಾತರ ಪರ ಅಂತಾ ಟೀಕೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಅಲ್ಪಸಂಖ್ಯಾತರು ಈ ದೇಶದಲ್ಲಿ ಹುಟ್ಟಿಲ್ವಾ. ಕೋಟ್ಯಂತರ ಅಲ್ಪಸಂಖ್ಯಾತರಿದ್ದಾರೆ, ಅವರು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದರು. ಜೆಡಿಎಸ್​ ನವರು ಜಾತ್ಯತೀತ ಎಂದು ಇಟ್ಟುಕೊಂಡು ಬದಲಾಗಿದ್ದಾರೆ. ದೆಹಲಿಗೆ ಕರೆದು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಜವಾಬ್ದಾರಿ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

Join Whatsapp