ಪ್ರವೀಣ್ ಹತ್ಯೆ ಮಾಡಿದವರು ಕೇರಳದವರಲ್ಲ, ಸ್ಥಳೀಯರು: ಗೃಹ ಸಚಿವ

Prasthutha|

ಶಿವಮೊಗ್ಗ: ಬಿಜೆಪಿ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದವರು ಕೇರಳದವರಲ್ಲ, ದಕ್ಷಿಣ ಕನ್ನಡ ಜಿಲ್ಲೆಯವರೇ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

- Advertisement -

ಈ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆಯ ಹಂತಕರು ಸ್ಥಳೀಯರೇ ಆಗಿದ್ದಾರೆ. ಇವರ ಹಿನ್ನೆಲೆ ಏನು ಯಾವ ಸಂಘಟನೆಗೆ ಸೇರಿದವರು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದರು.

Join Whatsapp