Home ಟಾಪ್ ಸುದ್ದಿಗಳು ಪ್ರವೀಣ್ ಹತ್ಯೆ ಮಾಡಿದವರು ಕೇರಳದವರಲ್ಲ, ಸ್ಥಳೀಯರು: ಗೃಹ ಸಚಿವ

ಪ್ರವೀಣ್ ಹತ್ಯೆ ಮಾಡಿದವರು ಕೇರಳದವರಲ್ಲ, ಸ್ಥಳೀಯರು: ಗೃಹ ಸಚಿವ

ಶಿವಮೊಗ್ಗ: ಬಿಜೆಪಿ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದವರು ಕೇರಳದವರಲ್ಲ, ದಕ್ಷಿಣ ಕನ್ನಡ ಜಿಲ್ಲೆಯವರೇ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆಯ ಹಂತಕರು ಸ್ಥಳೀಯರೇ ಆಗಿದ್ದಾರೆ. ಇವರ ಹಿನ್ನೆಲೆ ಏನು ಯಾವ ಸಂಘಟನೆಗೆ ಸೇರಿದವರು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಹೇಳಿದರು.

Join Whatsapp
Exit mobile version