ನಮ್ಮ ಯೋಜನೆ ವಿರೋಧಿಸಿದವರೇ ಈಗ ಗ್ಯಾರಂಟಿ ಹಿಂದೆ ಬಿದ್ದಿದ್ದಾರೆ: ಸಿದ್ದರಾಮಯ್ಯ

Prasthutha|

ಕೊಪ್ಪಳ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ವಿರೋಧಿಸಿದವರೇ, ಇಂದು ಬೇರೆ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಜನರಿಗೆ ಗ್ಯಾರಂಟಿ ನೀಡಲು ಮುಂದಾಗಿರುವುದು ವಿಪರ್ಯಾಸ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -


ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಬಿಜೆಪಿಯವರು ನುಡಿದಂತೆ ನಡೆಯದವರು. ನಾವು ಯಾವುದೇ ಯೋಜನೆ ಮಾಡಿದರೆ ರಾಜ್ಯ, ದೇಶ ದಿವಾಳಿಯಾಗುತ್ತದೆ. ಅದೇ ಬಿಜೆಪಿಯವರು ಮಾಡಿದರೆ, ಅದು ಹೇಗೆ ಉದ್ಧಾರ ಮಾಡುವ ಕೆಲಸವಾಗುತ್ತದೆ” ಎಂದು ಪ್ರಶ್ನಿಸಿದರು.



Join Whatsapp