ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗುತ್ತಾರೆ: ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ಕಿಡಿ

Prasthutha|

ಬೆಂಗಳೂರು: ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗ್ತಾರೆ. ಎಲ್ಲರೂ ನಾಶ ಆಗುತ್ತಾರೆ. ಈಗ ಅದೇ ಆಗುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರಕ್ಕೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್ಡಿ ಕುಮಾರಸ್ವಾಮಿ ಶಾಪ ಹಾಕಿದ್ದಾರೆ.

- Advertisement -


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಳಿ ಇರುವ ದಾಖಲೆ ಬಿಟ್ಟರೆ 5-6 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.


ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ. 12 ವರ್ಷದ ಹಳೆಯ ಕೇಸಲ್ಲಿ ಜೈಲಲ್ಲಿ ಕಳುಹಿಸೋಕೆ ಸಾಧ್ಯವಿಲ್ಲ. ರಾಜೀನಾಮೆ ನೀಡುವ ಸ್ಥಿತಿ ಬಂದರೆ ನಾನೇ ಕೊಡುತ್ತೇನೆ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ಆಕ್ರೋಶ ವ್ಯಕ್ತಪಡಿಸಿದರು.



Join Whatsapp