ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಎಂದವರಿಗೆ ಉತ್ತರ ಸಿಕ್ಕಿದೆ: ಸಿಎಂ ಸಿದ್ದರಾಮಯ್ಯ ಕಿಡಿ

Prasthutha|

- Advertisement -

ಬೆಂಗಳೂರು: ಇಂದು ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದರು.

ತೆರೆದ ಜೀಪಿನಲ್ಲಿ ಪರಿವೀಕ್ಷಣೆ ಮಾಡಿದರು.

- Advertisement -
  • ಗೃಹಲಕ್ಷ್ಮಿ,ಶಕ್ತಿ,ಗೃಹಜ್ಯೋತಿ,ಅನ್ನಭಾಗ್ಯ ಮತ್ತು ಯುವನಿಧಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿಯುತ್ತಿರುವವರಿಗೆ ರಾಜ್ಯದಲ್ಲಿ ಆರ್ಥಿಕ ಪ್ರಗತಿ ಪ್ರಗತಿ ಸಾಧಿಸಿ ತೋರಿಸುವ ಮೂಲಕ ನಾವು ಉತ್ತರ ನೀಡಲಿದ್ದೇವೆ.ಹೊಸ ಅವಿಷ್ಕಾರಗಳನ್ನು ನಡೆಸಿ ಅವು ಫಲಾನುಭವಿಗಳಿಗೆ ಇನ್ನಷ್ಟು ಹೆಚ್ಚು ನೆರವಾಗುವ ರೀತಿಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಉದ್ಯುಕ್ತವಾಗಿದೆ ಎಂದರು.ಶಕ್ತಿ ಯೋಜನೆಯಡಿ ಮಹಿಳೆಯರು 270 ಕೋಟಿ ಟ್ರಿಪ್ ಉಚಿತ ಪ್ರಯಾಣ ಸೌಲಭ್ಯ ಪಡೆದಿದ್ದಾರೆ. ಮಹಿಳೆಯರು 6541 ಕೋಟಿ ರೂ.ಗಳಷ್ಟು ಪ್ರಯಾಣ ವೆಚ್ಚ ಉಳಿತಾಯ ಮಾಡಿದ್ದಾರೆ. ಅನ್ನ ಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರದ ಅಸಹಕಾರದಿಂದಾಗಿ ಅಕ್ಕಿಯ ಬದಲಿಗೆ ನಗದು ವರ್ಗಾವಣೆ ಮಾಡಲಾಗುತ್ತಿದೆ. ನಮ್ಮ ಸರ್ಕಾರದ ಜನಕಲ್ಯಾಣ ಯೋಜನೆಗಳು ಐದು ಗ್ಯಾರಂಟಿಗಳಿಗಷ್ಟೇ ಸೀಮಿತವಾಗಿಲ್ಲ,ದುರ್ಬಲ ವರ್ಗದವರಿಗೆ ಸಾಮಾಜಿಕ ಭದ್ರತೆ ನೀಡುವ ವಿವಿಧ ಯೋಜನೆಗಳಡಿ 13,027 ಕೋಟಿ ರೂ.ವೆಚ್ಚ ಮಾಡಲಾಗಿದೆ.ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ಮುಂಗಾರು ಹಂಗಾಮುಗಳಲ್ಲಿ ರಾಜ್ಯ ಸಂಪೂರ್ಣ ವಿಭಿನ್ನ ಪರಿಸ್ಥಿತಿಯನ್ನು ಎದುರಿಸಿದೆ.

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಅನುದಾನ ಹಂಚಿಕೆ ಬಗ್ಗೆ ಸಿಎಂ ಭಾಷಣದಲ್ಲಿ ಪ್ರಸ್ತಾಪ ಮಾಡಿದರು. ಜನಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ರಾಜ್ಯದ ಜವಾಬ್ದಾರಿಯಾದರೆ, ಇವುಗಳಿಗೆ ಪೂರಕ ಸಂಪನ್ಮೂಲ ಒದಗಿಸುವುದು ಕೇಂದ್ರದ ಹೊಣೆಗಾರಿಕೆ. ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಈ ಆಶಯದಿಂದ ದೂರ ಸರಿಯುತ್ತಿದೆ. ರಾಜ್ಯಗಳಿಗೆ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ತಾರತಮ್ಯವಾಗ್ತಿದೆ. ಕೇಂದ್ರ ಸರ್ಕಾರ ಸಂವಿಧಾನದ ಆಶಯಗಳನ್ನ ನಿರ್ಲಕ್ಷಿಸಿದೆ ಎಂದರು.

ರಾಜ್ಯಕ್ಕೆ ದೊರೆಯಬೇಕಾದ ಹಣಕಾಸಿನ ಪಾಲು ನೀಡಲು ಕೇಂದ್ರ ಮೀನಮೇಷ ಎಣಿಸುತ್ತಿದೆ. ಹಣ ಪಡೆಯಲು ಕೋರ್ಟ್​ ಮೊರೆ ಹೋಗುವ ಅನಿವಾರ್ಯತೆ ಎದುರಾಗಿದೆ. ಇದು ಜನಹಿತಕ್ಕೆ ಒಳ್ಳೆಯದಲ್ಲ. ರಾಜ್ಯಗಳು ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಅನುದಾನ ಬಿಡುಗಡೆಗೆ ಸಿಎಂ ಒತ್ತಾಯ ಮಾಡಿದರು.

ಲೋಕಸಭೆ ಚುನಾವಣೆಯಲ್ಲಿ ಮತದಾರರು ತಮ್ಮ ರಾಜಕೀಯ ಪ್ರಬುದ್ಧತೆ ಮೆರೆದಿದ್ದಾರೆ. ಪ್ರಜಾಪ್ರಭುತ್ವ ಯಾರ ಕೈಗೊಂಬೆಯಾಗಲು ಸಾಧ್ಯವಿಲ್ಲವೆಂಬ ಸಂದೇಶ ರವಾನೆ ಮಾಡಿದ್ದಾರೆ ಎಂದು ಮಾಣೆಕ್ ಷಾ ಪರೇಡ್​​ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಮೇಕೆದಾಟು ಯೋಜನೆ, ಕುಡಿಯುವ ನೀರಿನ ಯೋಜನೆ ಹಾಗೂ ಕಾಮಗಾರಿ ಮತ್ತು ಭೂಸ್ವಾಧೀನ ಪ್ರಕ್ರಿಯೆಗೆ ಬೇರೆಡೆ ಕಚೇರಿ ಸ್ಥಾಪನೆ ಮಾಡಲಾಗುವುದು. ಮಳೆ, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ಜೊತೆಗೆ ಮನೆ ಹಂಚಿಕೆ. ಮಾನವ-ವನ್ಯ ಜೀವಿಗಳ ಸಂಘರ್ಷ ತಡೆಗಟ್ಟಲು 120 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ. 7 ಆನೆ ಟಾಸ್ಕ್ ಫೋರ್ಸ್, 2 ಚಿರತೆ ಟಾಸ್ಕ್ ಫೋರ್ಸ್ ರಚಿಸಲಾಗಿದೆ.



Join Whatsapp