ಶಾಸಕ ಕೆ.ಜಿ.ಬೋಪಯ್ಯಗೆ ಬೆದರಿಕೆ ಕರೆ: 1 ಕೋಟಿ ರೂ. ನೀಡುವಂತೆ ಬೇಡಿಕೆ

Prasthutha: January 7, 2022

ಮಡಿಕೇರಿ: ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಅವರಿಗೆ ವ್ಯಕ್ತಿಯೊಬ್ಬ ಕರೆ ಮಾಡಿ, ಮನೆಯ ಮೇಲೆ ಎ.ಸಿ.ಬಿ ದಾಳಿ ನಡೆಯಲಿದ್ದು, ಅದನ್ನು ತಡೆಯಲು 1 ಕೋಟಿ ನೀಡುವಂತೆ ಬೆದರಿಕೆಯೊಡ್ಡಿರುವ ಸಂಬಂಧ ಪ್ರಕರಣ ದಾಖಲಾಗಿದೆ.


ಬೋಪಯ್ಯ ಅವರು ಮಡಿಕೇರಿಯ ನಿವಾಸದಲ್ಲಿರುವಾಗ ಬುಧವಾರ ಸಂಜೆ 6.30ರ ಸುಮಾರಿಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ.


‘ದಾಳಿಗೆ ಅಧಿಕಾರಿಗಳು ಸಜ್ಜಾಗಿದ್ದಾರೆ. ಹಣ ನೀಡದಿದ್ದರೆ, ದಾಳಿ ನಡೆಯಲಿದೆ ಎಂದು ಆ ವ್ಯಕ್ತಿ ಕನ್ನಡದಲ್ಲಿ ಮಾತನಾಡಿ ಬೆದರಿಕೆಯೊಡ್ಡಿದ. ಅದಕ್ಕೆ ನಾನು ಯಾರಿಗೂ ಹಣ ನೀಡುವುದಿಲ್ಲವೆಂದು ಉತ್ತರಿಸಿದೆ. ಅದಾದ ಕೆಲವೇ ನಿಮಿಷದಲ್ಲಿ ಬೇರೊಂದು ನಂಬರ್ನಿಂದ ಮತ್ತೆ ಕರೆ ಮಾಡಿದ್ದ. ಘಟನೆ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದೇನೆ’ ಎಂದು ಬೋಪಯ್ಯ ತಿಳಿಸಿದರು.


ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆಂಧ್ರಪ್ರದೇಶ ಝಹೀಬ್ ಖಾನ್ ಎಂಬಾತನ ಹೆಸರಿನಲ್ಲಿ ಸಿಮ್ ಖರೀದಿಯಾಗಿರುವ ಮಾಹಿತಿ ಪೊಲೀಸರಿಗೆ ದೊರೆತಿದೆ ಎಂದು ತಿಳಿದುಬಂದಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!