ಸಿದ್ದರಾಮಯ್ಯ ಸಂಪುಟದ ಮತ್ತೆ ಮೂವರಿಗೆ ಕೊಠಡಿ ಹಂಚಿಕೆ

Prasthutha|

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಒಳಗೊಂಡಂತೆ ಮತ್ತೆ ಮೂವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ.

- Advertisement -

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ : 335, 336, 337 ಮತ್ತು 337 ಎ, ಸಚಿವರಾದ ಡಾ ಜಿ ಪರಮೇಶ್ವರ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ : 327 ಮತ್ತು 327 ಎ ಹಾಗೂ ರಾಮಲಿಂಗಾರೆಡ್ಡಿ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ: 329 ಮತ್ತು 329 ಎ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.



Join Whatsapp