ಚಂಡೀಗಢ: ಇಲ್ಲಿನ ಮುನ್ಸಿಪಲ್ ಕಾರ್ಪೊರೇಷನ್ ನ ಮೂವರು ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಗಳು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಕೌನ್ಸಿಲರ್ ಗಳಾದ ಪೂನಂ ದೇವಿ, ನೇಹಾ ಮುಸಾವತ್ ಮತ್ತು ಗುರ್ಚರಣ್ ಕಲಾ ಅವರು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿಗೆಸೇರ್ಪಡೆಯಾದರು.
ಚುನಾವಣೆಯಲ್ಲಿ ಅಕ್ರಮಗಳ ಆರೋಪದ ನಂತರ ಹೊಸದಾಗಿ ಚುನಾಯಿತರಾದ ಬಿಜೆಪಿಯ ಮೇಯರ್ ಮನೋಜ್ ಸೋಂಕರ್ ಅವರು ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನವೇ ಈ ಬೆಳವಣಿಗೆ ನಡೆದಿದೆ.