ರಾಜ್ಯ ಹೈಕೋರ್ಟ್​ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ಖಾಯಂ ಗೆ ಶಿಫಾರಸು

Prasthutha|

ಬೆಂಗಳೂರು: ರಾಜ್ಯ ಹೈಕೋರ್ಟ್​ನ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಖಾಯಂ ಮಾಡಿ ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ನ್ಯಾಯಮೂರ್ತಿಗಳಾದ ಮಹ್ಮದ್ ಗೌಸ್ ಶುಕ್ರೆ ಕಮಲ್, ರಾಜೇಂದ್ರ ಬಾದಾಮಿಕರ್, ಖಾಜಿ ಜಯಬುನ್ನೀಸಾ ಮೋಯುದ್ದೀನ್ ಅವರನ್ನು ಖಾಯಂ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡುವಂತೆ ಕೊಲಿಜಿಯಂ ಶಿಫಾರಸು ಮಾಡಲಾಗಿದೆ.

- Advertisement -

ರಾಜ್ಯ ಹೈಕೋರ್ಟ್ ನಲ್ಲಿ 62 ಮಂದಿ ನ್ಯಾಯಾಧೀಶರ ಹುದ್ದೆಗಳಿದ್ದು, ಪ್ರಸ್ತುತ 48 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಪಂಜಾಬ್ ಮತ್ತು ಹರಿಯಾಣ, ಬಾಂಬೆ ಮತ್ತು ಕರ್ನಾಟಕ ಹೈಕೋರ್ಟ್‌ಗಳಲ್ಲಿ 20 ನ್ಯಾಯಾಧೀಶರ ನೇಮಕಕ್ಕೆ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಅನುಮೋದನೆ ನೀಡಿದೆ.

- Advertisement -

ಸೋಮವಾರ ನಡೆದ ಕೊಲಿಜಿಯಂ ಸಭೆಯಲ್ಲಿ, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ಒಂಬತ್ತು ನ್ಯಾಯಾಂಗ ಅಧಿಕಾರಿಗಳನ್ನು ನ್ಯಾಯಾಧೀಶರ ಶ್ರೇಣಿಗೆ ಬಡ್ತಿ ನೀಡುವ ಪ್ರಸ್ತಾಪವನ್ನು ಅನುಮೋದಿಸಿತು.

ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಹೇಳಿಕೆಯ ಪ್ರಕಾರ, ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ಇಬ್ಬರು ವಕೀಲರನ್ನು ನೇಮಿಸುವ ಪ್ರಸ್ತಾವನೆಯನ್ನು ಕೊಲಿಜಿಯಂ ಅನುಮೋದಿಸಿದೆ.

ಅಂತೆಯೇ, ಸೆಪ್ಟೆಂಬರ್ 7 ರಂದು ನಡೆದ ಸಭೆಯಲ್ಲಿ, ಆರು ನ್ಯಾಯಾಂಗ ಅಧಿಕಾರಿಗಳನ್ನು ಬಾಂಬೆ ಹೈಕೋರ್ಟ್‌ನ ನ್ಯಾಯಾಧೀಶರನ್ನಾಗಿ ಉನ್ನತೀಕರಿಸಲು ಮತ್ತು ಮೂವರು ಹೆಚ್ಚುವರಿ ನ್ಯಾಯಾಧೀಶರನ್ನು ಕರ್ನಾಟಕ ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರನ್ನಾಗಿ ನೇಮಿಸಲು ನಿರ್ಧರಿಸಲಾಗಿತ್ತು.

Join Whatsapp