ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಮೂವರು ಆದಿವಾಸಿಗಳ ಹತ್ಯೆ

Prasthutha|

ಇಂಫಾಲ್: ಮಂಗಳವಾರ ಬೆಳಗ್ಗೆ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಆದಿವಾಸಿ ಜನಾಂಗದ ಮೂವರನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಬುಡಕಟ್ಟು ಜನಾಂಗದ ಪ್ರಾಬಲ್ಯದ ಕಂಗ್ಗುಯಿ ಪ್ರದೇಶದ ಇರೆಂಗ್ ಮತ್ತು ಕರಮ್ ವೈಫೇಯ್ ಗ್ರಾಮಗಳ ನಡುವೆ ಹೊಂಚು ಹಾಕಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -


ಮೂವರ ಹತ್ಯೆಯ ಘಟನೆಯನ್ನು ಸಾಮಾಜಿಕ ಸಂಘಟನೆಯಾದ ಬುಡಕಟ್ಟು ಏಕತೆಯ ಸಮಿತಿ ತೀವ್ರವಾಗಿ ಖಂಡಿಸಿದೆ.

Join Whatsapp