ನೆಲಮಂಗಲ: ಕಾರಿನ ಗ್ಲಾಸ್ ಒಡೆದು ವಿಜ್ಞಾನಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು
ಪೊಲೀಸರು ಬಂಧಿಸಿದ್ದಾರೆ.
ಮೈಲಾರಿ(22), ನವೀನ್(22) ಹಾಗೂ ಶಿವರಾಜ್(30) ಬಂಧಿತ ಆರೋಪಿಗಳು.
ಸೋಮ ಅಲಿಯಾಸ್ ಸೋನು, ಕೀರ್ತಿ ಅಲಿಯಾಸ್ ಉಮೇಶ್ ಎಂಬ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ರಾವುತನಹಳ್ಳಿಯಲ್ಲಿ ಆ.24ರಂದು ನ್ಯಾನೊ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರದ (ಸಿಇಎನ್ಎಸ್) 34 ವರ್ಷದ ವಿಜ್ಞಾನಿ ಅಶುತೋಷ್ ಕುಮಾರ್ ಸಿಂಗ್ ಅವರ ಕಾರಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಲ್ಲೆಗೆ ಯತ್ನಿಸಿದ್ದರು.