ಮಂಗಳೂರು: ಮಂಗಳೂರು ನಗರದ ಬೆಂದೂರ್ ವೆಲ್ ಅಪಾರ್ಟ್ ಮೆಂಟ್ ವೊಂದರ ಫ್ಲಾಟ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಪೂರ್ವ( ಕದ್ರಿ ) ಪೋಲಿಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ 3 ನೇ ಕ್ರಾಸ್ ರಸ್ತೆಯಲ್ಲಿರುವ ಪೀಬಿ ರೆಸಿಡೆನ್ಸಿ ಎಂಬ ಅಪಾರ್ಟ್ ಮೆಂಟ್ ನ 2 ನೇ ಮಹಡಿಯ ಫ್ಲಾಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದ ತಂಡ ದಾಳಿ ನಡೆಸಿದ್ದರು.
ಈ ವೇಳೆ ಅಕ್ರಮವಾಗಿ ಲಾಭ ಗಳಿಸುವ ಉದ್ದೇಶದಿಂದ ಹುಡುಗಿಯರನ್ನು ತರಿಸಿಕೊಂಡು ಅನೈತಿಕ ಚಟುವಟಿಕೆ ದಂಧೆಯನ್ನು ನಡೆಸುತ್ತಿದ್ದ ದಲ್ಲಾಳಿಗಳಾದ ಬಂಟ್ವಾಳ ವಿಟ್ಲಪಡ್ನೂರು ಗ್ರಾಮ ಪರ್ತಿಪಾಡಿಯ ಕೆ.ಪಿ. ಹಮೀದ್ (54), ಆಕಾಶಭವನ ನಂದನಪುರದ ಅನುಪಮಾ ಶೆಟ್ಟಿ(46), ಎಕ್ಕೂರು ವಾಸುಕಿ ನಗರದ ನಿಶ್ಮಿತಾ (23) ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳಿಂದ 5 ಮೊಬೈಲ್ ಫೋನುಗಳು ಹಾಗೂ 50,000 ರೂ. ನಗದು, ಮಾರುತಿ 800 ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ಕ್ರಮಕ್ಕಾಗಿ ಪ್ರಕರಣವನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿಲಾಗಿದೆ.