Home ಟಾಪ್ ಸುದ್ದಿಗಳು ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಬೆಂಗಳೂರು: ನಗರದಲ್ಲಿ ಮಾದಕವಸ್ತು ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪಶ್ಚಿಮ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ ‌14 ಕೆಜಿ 600ಗ್ರಾಂ ಗಾಂಜಾ ಹಾಗೂ ಆಟೋ‌ವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ಆರೋಪಿ ಸುನೀಲ್, ತನ್ನ​ ಆಟೋದಲ್ಲಿ ಗಾಂಜಾ ಸಾಗಿಸುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಕೆಂಗೇರಿ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 10.2ಕೆ.ಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ಬ್ಯಾಡರಹಳ್ಳಿ ಪೊಲೀಸರು ಇಬ್ಬರು ಗಾಂಜಾ ಮಾರಾಟಗಾರರನ್ನು ಬಂಧಿಸಿ 4 ಕೆಜಿ 422 ಗ್ರಾಂ ಗಾಂಜಾ ಹಾಗೂ 500ರೂ ನಗದನ್ನು ವಶಪಡಿಸಿಕೊಂಡಿದ್ದಾರೆ.

ಕಳೆದ ಫೆ.11 ರಂದು ಬೆಳಿಗ್ಗೆ 8-30 ಗಂಟೆ ಸಮಯದಲ್ಲಿ ಬ್ಯಾಡರಹಳ್ಳಿಯಲ್ಲಿ  ಗಾಂಜಾ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

Join Whatsapp
Exit mobile version