ಬೆಂಗಳೂರು: ಪಾಕಿಸ್ತಾನ್ ಜಿಂದಾಬಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಅವರನ್ನು ಕೋರಮಂಗಲದಲ್ಲಿರುವ ಬೆಂಗಳೂರಿನ ಒಂದನೇ ಎಸಿಎಂಎಂ ನ್ಯಾಯಾಲಯದ ಜಡ್ಜ್ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಮೂವರಿಗೆ ಎರಡು ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿದೆ.