ಮೂವರು ಬಿಜೆಪಿ ಸಂಸದರು ಸಂಪರ್ಕದಲ್ಲಿದ್ದಾರೆ: ಡಿ.ಕೆ. ಶಿವಕುಮಾರ್

Prasthutha|

ಕಲಬುರಗಿ: ಕಾಂಗ್ರೆಸ್ ಸೇರ್ಪಡೆಯಾಗಲು ಮೂವರು ಬಿಜೆಪಿ ಸಂಸದರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

- Advertisement -


ನಗರದ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.


ಸದ್ಯಕ್ಕೆ ಅವರ ಹೆಸರನ್ನು ಬಹಿರಂಗಪಡಿಸಲಾಗದು. ಇನ್ನೂ ಹಲವು ಮುಖಂಡರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಅಚ್ಚರಿಯ ಹೇಳಿಕೆ ನೀಡಿದರು.

- Advertisement -


ಬಿಜೆಪಿಯ ಡಿ.ವಿ.ಸದಾನಂದಗೌಡ ಅವರು ಬೆಂಗಳೂರಿನ ಕ್ಷೇತ್ರವೊಂದರಿಂದ ಕಾಂಗ್ರೆಸ್ ಟಿಕೆಟ್ ಮೂಲಕ ಸ್ಪರ್ಧಿಸುವ ಸಾಧ್ಯತೆಗಳ ಕುರಿತು ಶಿವಕುಮಾರ್ ಯಾವುದೇ ಹೇಳಿಕೆ ನೀಡಲಿಲ್ಲ.
ಜಯದೇವ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಎಚ್.ಡಿ.ದೇವೇಗೌಡ ಹಾಗೂ ಕುಮಾರಸ್ವಾಮಿ, ಅವರ ಮನೆಯವರು, ಅವರ ಮಗನ ಸ್ಪರ್ಧೆಯನ್ನೂ ನೋಡಿದ್ದೇವೆ. ಡಿ.ಕೆ. ಸುರೇಶ್ ಬರೀ ಸಂಸದ ಅಲ್ಲ. ಪಂಚಾಯಿತಿ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ. ಅವರಿಗೆ ಚುನಾವಣೆ ಎದುರಿಸುವುದು ಗೊತ್ತಿದೆ’ ಎಂದು ಹೇಳಿದರು.



Join Whatsapp