ಬಿಪಿನ್ ರಾವತ್ ಸಾವಿಗೆ ಸಂಭ್ರಮಾಚರಣೆ: ಮಂಗಳೂರಿನಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲು

Prasthutha|

ಮಂಗಳೂರು: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಮೃತಪಟ್ಟಿದ್ದಕ್ಕೆ ಸಂಭ್ರಮಾಚರಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿದೆ.

- Advertisement -


ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ ಬೆನ್ನಲ್ಲೇ ಪ್ರಕರಣ ದಾಖಲಾಗಿದ್ದು, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ಸದ್ಯ 3 ಫೇಸ್ಬುಕ್ ಪೋಸ್ಟ್ ಗಳ ಮೇಲೆ ಪ್ರಕರಣ ದಾಖಲಾಗಿದೆ. ಇವರಲ್ಲಿ ಒಬ್ಬರು ಕಾರ್ಕಳ ಮೂಲದವರು , ಇನ್ನೊಬ್ಬ ಬೆಂಗಳೂರು, ಮತ್ತೊಂದು ಪೋಸ್ಟ್ ಮಾಡಿದ್ದವರ ಮಾಹಿತಿ ಸಿಕ್ಕಿಲ್ಲ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.


ಫೇಸ್ ಬುಕ್ ನಲ್ಲಿ ಬಿಪಿನ್ ರಾವತ್ ಸಾವಿನ ಬಗ್ಗೆ ಪ್ರಚೋದನಕಾರಿಯಾಗಿ ಬರೆದಿದ್ದಾರೆ ಎಂದು ತಿಳಿಸಿದ ಪೊಲೀಸ್ ಕಮಿಷನರ್ ಶಶಿಕುಮಾರ್, ದೂರು ಬಂದ ಹಿನ್ನೆಲೆ ಕೇಸು ದಾಖಲಿಸಿದ್ದೇವೆ. ಮೂವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತೇವೆ. ವಿಚಾರಣೆ ಬಳಿಕ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ

Join Whatsapp