ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ: ಕಾಂಗ್ರೆಸ್‌ ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು

Prasthutha|

►ಮೈತ್ರಿ ಪಕ್ಷದ 5ನೇ ಅಭ್ಯರ್ಥಿಗೆ ಸೋಲು

- Advertisement -


ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು. ಒಟ್ಟು ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯಗಳಿಸಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ ಸೋಲು ಕಂಡಿದ್ದಾರೆ. ಈ ಮೂಲಕ ಮೈತ್ರಿಗೆ ಮುಖಭಂಗ ಆಗಿದೆ.

ಅಜಯ್ ಮಾಕನ್ -47, ನಾಸೀರ್ ಹುಸೇನ್ – 46, ಜಿ.ಸಿ. ಚಂದ್ರಶೇಖರ – 45, ನಾರಾಯಣಸಾ ಭಾಂಡಗೆ – 48, ಕುಪೇಂದ್ರ ರೆಡ್ಡಿ – 35 ಮತಗಳನ್ನು ಗಳಿಸಿದ್ದಾರೆ.

- Advertisement -

ಪಕ್ಷೇತರ ಶಾಸಕರಾದ ಗಾಲಿ ಜನಾರ್ದನ ರೆಡ್ಡಿ, ದರ್ಶನ್ ಪುಟ್ಟಣ್ಣಯ್ಯ, ಪುಟ್ಟ ಸಿದ್ದೇಗೌಡ, ಲತಾ ಮಲ್ಲಿಕಾರ್ಜುನ ಅವರು ಕಾಂಗ್ರೆಸ್ ಅನ್ನು ಬೆಂಬಲಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ನ ಯಾವೊಬ್ಬ ಶಾಸಕರೂ ಅಡ್ಡ ಮತದಾನ ಮಾಡದೇ ಇದ್ದಿದ್ದರಿಂದ ನಿರಾಯಾಸವಾಗಿ ಗೆಲುವನ್ನು ಪಡೆದುಕೊಂಡಿದೆ.

ಬಿಜೆಪಿ- ಜೆಡಿಎಸ್ ಮೈತ್ರಿ ಬಳಿಕ ನಡೆದ ಚುನಾವಣೆಯಾದ ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಗಳಿಸಿತ್ತು. ಇಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮೈತ್ರಿ ಪಕ್ಷಕ್ಕೆ ಮುಖಭಂಗವಾಗಿದೆ


Join Whatsapp