ಭಾರತ್ ಜೋಡೊ ಯಾತ್ರೆಗೆ ಹಣ ನೀಡದಿದ್ದಕ್ಕೆ ಬೆದರಿಕೆ: ಮೂವರು ಕಾಂಗ್ರೆಸ್ ಕಾರ್ಯಕರ್ತರ ಅಮಾನತು

Prasthutha|

ತಿರುವನಂತಪುರ: ಭಾರತ್ ಜೋಡೊ ಯಾತ್ರೆಗೆ ಹಣ ನೀಡಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ತರಕಾರಿ ವ್ಯಾಪಾರಿಯೊಬ್ಬರಿಗೆ ಬೆದರಿಕೆ ಹಾಕಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದ್ದು, ಮೂವರು ಕಾರ್ಯಕರ್ತರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.

- Advertisement -


ಕಾಂಗ್ರೆಸ್ ಕಾರ್ಯಕರ್ತರು ತರಕಾರಿ ವ್ಯಾಪಾರಿಗೆ ಬೆದರಿಕೆ ಹಾಕುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೇರಳ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಕೆ. ಸುಧಾಕರನ್, ‘ಘಟನೆಯಲ್ಲಿ ಭಾಗಿಯಾದ ಮೂವರು ಕಾರ್ಯಕರ್ತರನ್ನು ತಕ್ಷಣವೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ’ ಎಂದು ಹೇಳಿದ್ದಾರೆ.



Join Whatsapp